ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ ಮಾಡಿದ್ದೆವು ಅದರಂತೆ ನೀಡುತ್ತೇವೆ ಎಂದರು. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು ಎಂದು ಹೇಳಿದ್ದಾರೆ.
ಕೆಲವರು ಸತತವಾಗಿ ಮೂರು ಫೇಸ್ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದು ಹೇಳಿದ್ದರಿಂದ 5 ಗಂಟೆಗಳ ಕಾಲ 3 ಫೇಸ್ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ಆದರೆ ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕು ಎಂದು ಸೂಚನೆ ನೀಡಲಾಗಿದೆ. ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ವಿದ್ಯುತ್ ಅನ್ನು ಸಹ 7 ಗಂಟೆಗಳ ಕಾಲ ನೀಡಲು ಸಾಧ್ಯವಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಗಿದೆ ಎಂದರು.
ಇದನ್ನೂ ಓದಿ: ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ| ಬಯ್ಯಾಪೂರ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿದ ರೈತರು
ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳ
ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು, ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2400 ರಿಂದ 3200 ಮೆ.ವ್ಯಾಟ್, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಂಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾಟ್ ಕರ್ನಾಟಕಕ್ಕೆ ಉಳಿತಾಯವಾಗಲಿದೆ ಹಾಗೂ ಖರೀದಿ ಮಾಡುತ್ತಿರುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಇಂದಿನಿಂದ 7 ತಾಸು ವಿದ್ಯುತ್‌ನ್ನು ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ. ಗೃಹಬಳಕೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ. ಪಂಪ್‌ಸೆಟ್‌ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಿದೆ. 13100 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ ಎಂದರು.
ವಿಡಿಯೋ ನೋಡಿ: ಶಿಕ್ಷಣ ಇಲಾಖೆಯ ಜವಾಬ್ದಾರಿ ಪಂಚಾಯತ್ ರಾಜ್ ಇಲಾಖೆಗೆ! Janashakthi Media