ಕೊಪ್ಪಳ| ಗ್ಯಾಸ್ ಸಿಲಿಂಡರ್ ಸ್ಫೋಟ; 7 ಮಂದಿಗೆ ಗಂಭೀರ ಗಾಯ

ಕೊಪ್ಪಳ: ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40), ನಾಗರಾಜ (18), ದುರುಗಮ್ಮ (17), ವಿಷ್ಣು (16), ಶ್ರೀಕಾಂತ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಕಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ತುಮಕೂರು | ಹಮಾಲಿ ಕಲ್ಯಾಣ ಮಂಡಳಿ ರಚನೆಗೆ ಸಿಐಟಿಯು ಆಗ್ರಹ

ಹುಸೇನಮ್ಮ ಮನೆಯಲ್ಲಿ ಹೊಸದಾಗಿ ಸಿಲಿಂಡರ್ ತೆಗೆದುಕೊಂಡಿದ್ದರು. ಬೆಳಗ್ಗೆ ಆನ್‌ ಮಾಡುವಾಗ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ನೆಲಸಮವಾಗಿದೆ.

ಅಲ್ಲದೇ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು‌ ಬಿಟ್ಟಿವೆ. ಮನೆಯ ಅಕ್ಕಪಕ್ಕ ನಿಂತವರಿಗೂ ಸುಟ್ಟ ಗಾಯಗಳಾಗಿವೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ.

ಇದನ್ನೂ ನೋಡಿ: ಸಾರಿಗೆ ಕಾರ್ಮಿಕರ ಭವಣೆಗಳು – ಕಣ್ತೆರೆಯದ ಸರಕಾರJanashakthi Media

Donate Janashakthi Media

Leave a Reply

Your email address will not be published. Required fields are marked *