ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು-ಸಾವು

ನೆಲ್ಲೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ನೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದ್ದು, ಸಾವಿಗೆ ಆಮ್ಲಜನಕದ ಕೊರತೆಯೇ ಕಾರಣ ಎಂಬ ಆರೋಪಗಳು ಕೇಳಿ ಬಂದಿವೆ.

ಇದನ್ನೂ ಓದಿ:ಉತ್ತರಾಖಂಡ ಭೀಕರ ದುರಂತ:ಟ್ರಾನ್ಸ್‌ಫಾರ್ಮರ್ ಸ್ಫೋಟ 15 ಮಂದಿ ಸಾವು

ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಅಧಿಕಾರಿಗಳು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ. ಆಕ್ಸಿಜನ್ ಕೊರತೆಯಿಂದ ಯಾವುದೇ ರೋಗಿಗಳೂ ಸಾವನ್ನಪ್ಪಿಲ್ಲ. ಕಾಯಿಲೆಗಳಿಂದಲೇ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ.

8 ಮಂದಿ ರೋಗಿಗಳ ಪೈಕಿ 6 ಮಂದಿ ತೀವ್ರ ನಿಗಾ ಘಟಕ (ಎಂಐಸಿಯು)ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಪರಿಸ್ಥಿತಿ ಕೈಮೀರುವ ಬೆಳವಣಿಗೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿದ ಸರ್ಕಾರಿ ಜನರಲ್ ಆಸ್ಪತ್ರೆಯ ಅಧೀಕ್ಷಕರು, ಕೂಲಂಕುಷ ತನಿಖೆ ನಡೆಸಿದರು. ಇದರಂತೆ ತನಿಖೆಯ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ವರದಿಯಲ್ಲಿ ಸಾವಿಗೂ, ಆಕ್ಸಿಜನ್ ಕೊರತೆಗೂ ಸಂಬಂಧವಿಲ್ಲ. ವೈದ್ಯಕೀಯ ಕಾರಣಗಳಿಂದಾಗಿಯೇ ರೋಗಿಗಳು ಸಾವನ್ನಪ್ಪಿದ್ದಾರೆಂದು ಎಂದು ಮಾಹಿತಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *