ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: 8 ಮಂದಿ ಬಂಧನ

ಮಂಗಳೂರು: ಮೇ 1 ಗುರುವಾರದಂದು ನಗರದ ಬಜಪೆ ಸಮೀಪದಲ್ಲಿ ನಡೆದ ಸುಹಾಸ್‌ ಶೆಟ್ಟಿ ಎಂಬಾತನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು. ಹತ್ಯೆ

ಮೇ 03 ಶನಿವಾರದಂದು ನಗರದ ಕಮಿಷನರ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿದ್ದೂ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಕಾಶ್ಮೀರಿಗಳನ್ನ ಟಾರ್ಗೆಟ್‌ ಮಾಡುವುದು ಸರಿಯಲ್ಲ: ಹಿಮಾಂಶಿ ನರ್ವಾಲ್‌

ಹೊಸ ಟಾಸ್ಕ್‌ ಫೋರ್ಸ್‌

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಕೋಮು ಗಲಭೆ ತಡೆಯಲು ಹೊಸ ಟಾಸ್ಕ್‌ ಪೋರ್ಸ್‌ ಕೋಮು ನಿಗ್ರಹ ಕಾರ್ಯಪಡೆ ರಚಿಸುವುದಾಗಿ ಗೃಹ ಸಚಿವರು ಹೇಳಿದರು. ಈ ಎರಡು ಜಿಲ್ಲೆಗೆ ಮಾತ್ರ ಇದು ಸೀಮಿತವಾಗಿರುತ್ತದೆ.

ಪ್ರತ್ಯೇಕವಾಗಿ ಆಯಂಟಿ ನಕ್ಸಲ್ ಫೋರ್ಸ್ ನಂತೆ ಆಯಂಟಿ ಕಮ್ಯುನಲ್ ಫೋರ್ಸ್ ಕೆಲಸ ಮಾಡುತ್ತದೆ. ರೆಗ್ಯುಲರ್ ಪೊಲೀಸರೊಂದಿಗೆ ಸಮನ್ವಯದೊಂದಿಗೆ ಇದು ಕೆಲಸ ಮಾಡಲಿದೆ ಎಂದು ಮಾಹಿತಿ ನೀಡಿದರು.

ಪ್ರಚೋದನಕಾರಿ ಭಾಷಣ ಮಾಡಿದರೆ, ಹೇಳಿಕೆ ನೀಡಿದರೆ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದಾಗಿ ಹೇಳಿದರು.‌

ಇದನ್ನೂ ನೋಡಿ: ಸಿಲಿಂಡರ್ ಗೆ ಮಾಲಾರ್ಪಣೆ ಮಾಡಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *