ಅಮಿತ್ ಶಾ ಕಾರ್ಯಕ್ರಮದಲ್ಲಿ ಬಿಸಿಲಿನ ತಾಪಕ್ಕೆ 8 ಮಂದಿ ಸಾವು, 123 ಜನ ಅಸ್ವಸ್ಥ

ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಮುಂಬೈನಲ್ಲಿ ನಡೆದ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಕನಿಷ್ಠ 7-8 ಜನ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಹೇಳಿದ್ದಾರೆ.

ಸಾಮಾಜಿಕ ಕಾರ್ಯಕರ್ತ ದತ್ತಾತ್ರೇಯ ನಾರಾಯಣ ಅಲಿಯಾಸ್ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾದ ಈ ಮೆಗಾ ಕಾರ್ಯಕ್ರಮದಲ್ಲಿ ಇಂದು 120ಕ್ಕೂ ಹೆಚ್ಚು ಜನ ಬಿಸಿಲಿನ ಝಳದಿಂದ ಡಿಹೈಡ್ರೇಶನ್ ಹಾಗೂ ಶಾಖ-ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇವರಲ್ಲಿ ಹದಿಮೂರು ಜನರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಖಾರ್ಘರ್‌ನ 306 ಎಕರೆ ವಿಸ್ತಾರವಾದ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅಪ್ಪಾಸಾಹೇಬ್ ಧರ್ಮಾಧಿಕಾರಿಯ ಲಕ್ಷಾಂತರ ಅಭಿಮಾನಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರ ಸರ್ಕಾರ ನೀಡುವ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಧರ್ಮಾಧಿಕಾರಿಗೆ ಪ್ರದಾನ ಮಾಡಿದರು.

ಇದನ್ನೂ ಓದಿ : ಬಿಜೆಪಿಗೆ ದೊಡ್ಡ ಹಿನ್ನೆಡೆ ತಂದ ಮಾಡಾಳು ಪ್ರಕರಣ; ದಾವಣಗೆರೆಗೆ ಶಾ ಭೇಟಿ ಏಕಾಏಕಿ ರದ್ದು!

ಇಂದು ಬೆಳಗ್ಗೆಯಿಂದಲೇ ಜನ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಮತ್ತು ಬೆಳಗ್ಗೆ 11.30ರ ಸುಮಾರಿಗೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆವರೆಗೆ ನಡೆಯಿತು.

Donate Janashakthi Media

Leave a Reply

Your email address will not be published. Required fields are marked *