ಶಿವಮೊಗ್ಗ: ನವೆಂಬರ್ ಎರಡನೇ ವಾರ ಶಿವಮೊಗ್ಗದಲ್ಲಿ ₹ 3,000 ಕೋಟಿ ವೆಚ್ಚದಲ್ಲಿ ಆರಂಭಿಸಲಿರುವ 800 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಎಸ್.ಬಂಗಾರಪ್ಪ ಇಲ್ಲಿ ತಿಳಿಸಿದರು.
ಇದನ್ನೂ ಓದಿ : ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್ ಚಾಲಕ
ಗ್ರಾಮೀಣ ಭಾಗದಲ್ಲಿ ಮಕ್ಕಳು ಶಾಲೆ ಬಿಡುವುದನ್ನು ತಪ್ಪಿಸಲು ಈ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಈ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಮನೆಯಿಂದ ಕರೆತರಲು, ಬಿಟ್ಟುಬರಲು ಇಲಾಖೆಯಿಂದಲೇ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಆಯಾ ಶಾಲೆಯ ಆಡಳಿತ ಮಂಡಳಿಗಳೇ ಬಸ್‌ನ ನಿರ್ವಹಣೆ ಮಾಡಲಿವೆ’ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪದವಿಪೂರ್ವ ಕಾಲೇಜಿನ 800, ಸರ್ಕಾರಿ ಶಾಲೆಗಳ 13,000 ಹಾಗೂ ಅನುದಾನಿತ ಶಾಲೆಗಳ 6,000 ಶಿಕ್ಷಕರ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಹೇಳಿದರು.
ಡಿ.7ಕ್ಕೆ ಟಿಇಟಿ: ಅದಕ್ಕೆ ಪೂರ್ವಭಾವಿಯಾಗಿ ಡಿ.7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ. ಅಕ್ಟೋಬರ್ 23ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ. ಪರೀಕ್ಷೆಗೆ ಹಾಜರಾಗುವವರು ನವೆಂಬರ್ 9ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಿಸಿದರು.
ಇದನ್ನೂ ನೋಡಿ : ಪಿಚ್ಚರ್ ಪಯಣ – 164 ಚಿತ್ರ : ರಕ್ಕಸ (ಕಿರುಚಿತ್ರ) ನಿರ್ದೇಶಕ ಜಿ. ವಿಷ್ಣು ಜೊತೆ ಫಣಿರಾಜ್ ಮಾತುಕತೆ
