ಬರ ಪರಿಹಾರಕ್ಕಾಗಿ 800 ಕೋಟಿ ರೂ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು. ಸಿಎಂ  ಸಿ ದ್ದರಾಮಯ್ಯ

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ನಿರ್ವಹಣೆಗೆ-ಬರ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ರೂ.800 ಕೋಟಿ ಹಣವನ್ನು ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಮೀನ-ಮೇಷ ಎಣಿಸುತ್ತಿದೆ. ಬರ ಪರಿಸ್ಥಿತಿ ಸಂದರ್ಭದಲ್ಲಿ 150 ದಿನ ಕೆಲಸ ನೀಡಬೇಕು. ಇದಕ್ಕಾಗಿ ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದ ರೈತರು ಬರದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯ ಸರ್ಕಾರದಿಂದ ಯಾವುದೇ ರೀತಿಯಾದಂತಹ ಬರ ಪರಿಹಾರ ರೈತರಿಗೆ ತಲುಪಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು ಇದಕ್ಕೆ ಸಿಎಂ ಸಿದ್ದರಾಮಯ್ಯ ನೀಡಿದ್ದು, ಬರ ಪರಿಹಾರ ರೈತರಿಗೆ ತಲುಪಿಲ್ಲ ಎಂದು ಕುಮಾರಸ್ವಾಮಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ಏನು ಗೊತ್ತಿಲ್ಲ. 800 ಕೋಟಿಗೂ ಹೆಚ್ಚು ಬರ ಪರಿಹಾರದ ಹಣ ಬಿಡುಗಡೆ ಆಗಿದೆ. ಕೇಂದ್ರ ಸರ್ಕಾರದ ಬಳಿಯೂ ಬರ ಪರಿಹಾರಕ್ಕಾಗಿ ಮನವಿ ಮಾಡಿದ್ದೇವೆ. ಕೇಂದ್ರದಿಂದ ಈವರೆಗೂ ಯಾವುದೇ ರೀತಿಯಾದ ಅನುದಾನ ಬಂದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಮುಂದಿನ ಸಿಎಂ ಸತೀಶ್​ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ ಶಾಸಕ

ಇದೇ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿ ಅವರು ಆಧಾರ ರಹಿತ ಆರೋಪಗಳ ಮೂಲಕ ನಗೆಪಾಟಲಿಗೀಡಾಗುತ್ತಿದ್ದಾರೆ. ಕುಮಾರಸ್ವಾಮಿ ಯಾವುದೇ ಆಧಾರವಿಲ್ಲದೆ ಅಪಪ್ರಚಾರ ಮಾಡುತ್ತಿದ್ದಾರೆ. ಜನ ಇದನ್ನೆಲ್ಲ ನೋಡುತ್ತಾ ಅವರನ್ನು ನೋಡಿ ನಗುತ್ತಿದ್ದಾರೆ. ಇದರಿಂದ ಅವರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

ವಿಡಿಯೋ ನೋಡಿ: ಪೋಕ್ಸೋ ಪ್ರಕರಣದ ಆರೋಪಿ ಸ್ವಾಮಿಗೆ ಪಾದಪೂಜೆ ! ಜನರ ಪ್ರಜ್ಞೆಗೆ ಏನಾಗಿದೆ? – ಮೂಡ್ನಾಕೂಡು ಚಿನ್ನಸ್ವಾಮಿ

Donate Janashakthi Media

Leave a Reply

Your email address will not be published. Required fields are marked *