9. 10 ತರಗತಿ ಮಕ್ಕಳಿಗೂ ಮೊಟ್ಟೆ:ಬಾಲಕಿ ಬರೆದ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು:1ರಿಂದ 8ನೇ ತರಗತಿ ಮಕ್ಕಳಿಗಷ್ಟೇ ಮೊಟ್ಟೆಯನ್ನು ವಿತರಿಸಲಾಗುತ್ತಿದ್ದುದರಿಂದ . ಅವರು ಇತರ ಮಕ್ಕಳೊಂದಿಗೆ ಹಂಚಿಕೊಂಡು ತಿನ್ನುತ್ತಿದ್ದರು. ಆ ಮಾನವೀಯ ಗುಣ ಸರ್ಕಾರದ ಗಮನ ಸೆಳೆದಿತ್ತು. ಇದರ ಪರಿಣಾಮವಾಗಿಯೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 9. 10 ತರಗತಿ ಮಕ್ಕಳಿಗೂ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಶಾಲಾ ಬಾಲಕಿಯೊಬ್ಬರು, 9,10 ನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುತ್ತಿರುವ ಕುರಿತು  ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಕುರಿತು  ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ , ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಠಿಕ ಆಹಾರ ದೊರೆಯಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1ರಿಂದ 8ನೇ ತರಗತಿ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿ ಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್‌ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:“ಸಾರ್ವತ್ರಿಕ ಮೂಲ ಆದಾಯ”ದ ಪ್ರಶ್ನೆ, ಮೊಟ್ಟೆಗಳನ್ನು ಒಡೆಯದೆ ಆಮ್ಲೆಟ್.. ?

ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ ಸೌಹರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ

Donate Janashakthi Media

Leave a Reply

Your email address will not be published. Required fields are marked *