ಉಡುಪಿ: ಬೈಂದೂರು, ಗಂಗೊಳ್ಳಿ ಹಾಗೂ ಕೊಲ್ಲೂರು ಪೊಲೀಸ್ ಠಾಣೆಗಳ ಒಟ್ಟು 9 ಮಂದಿ ಪೊಲೀಸ್ ಸಿಬ್ಬಂದಿ ಗಳನ್ನು ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ್ಯ ತೋರಿಸಿದ ಆರೋಪದಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅಮಾನತುಗೊಳಿಸಿದ್ದಾರೆ.
ಈ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಸರಿಯಾದ ಮಾಹಿತಿಯನ್ನು ಕಲೆ ಹಾಕುವಲ್ಲಿ ವಿಫಲರಾಗಿ, ಕರ್ತವ್ಯ ನಿರ್ಲಕ್ಷ್ಯತನ ತೋರಿದ್ದಕ್ಕಾಗಿ ಒಟ್ಟು 9 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈವರೆಗಿನ ತನಿಖೆಯಲ್ಲಿ ಈ ಪ್ರಕರಣದಲ್ಲಿ ಇವರು ಭಾಗಿಯಾಗಿರುವುದು ಕಂಡು ಬಂದಿಲ್ಲ ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಇದನ್ನೂ ಓದಿ: ಪಹಲ್ಗಾಂ ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯ ಪ್ರತಿಭಟನೆ
ಅದೇ ರೀತಿ ಈ ಪ್ರಕರಣಕ್ಕೆ ಸಂಬಂಧಿಸಿ ಬೈಂದೂರು, ಗಂಗೊಳ್ಳಿ ಹಾಗೂ ಕೊಲ್ಲೂರು ಪೊಲೀಸ್ ಠಾಣೆಗಳ ಪೊಲೀಸ್ ಉಪನಿರೀಕ್ಷಕರ ವಿರುದ್ಧವೂ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದೆ. ಮುಂದೆ ವರದಿಯ ಆಧಾರ ದಲ್ಲಿ ಅವರ ಮೇಲೂ ಕ್ರಮ ಜರಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ನೋಡಿ: ಎನ್ಕೌಂಟರ್ ರಾಜ್ಯ | ಉದಯ ಗಾಂವಕಾರ Janashakthi Media