9 ವಿಶ್ವವಿದ್ಯಾಲಯ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು : ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9  ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಚರ್ಚೆ ನಡೆದಿದ್ದು, ಇದರ ವಿರುದ್ಧ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಇಂದು(ಮಾರ್ಚ್​ 06) ವಿಧಾನಸಭೆ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಲೇ ಎದ್ದು ನಿಂತು ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಈ ಬಗ್ಗೆ ವಿಜಯೇಂದ್ರ ಅವರ ಅಕ್ಕನ ಮಗನಿಗೆ ವಿದೇಶದಲ್ಲಿ ಸೀಟು ಸಿಗದಿದ್ದನ್ನು ಉದಾಹರಣೆ ನೀಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ. ಎಸ್.ಎಂ. ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗನಿಗೆ ಪಿಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಸಿಗಲಿಲ್ಲ. ಬೆಂಗಳೂರಿಗೆ ಪಿಇಎಸ್ ಫೇಮಸ್ ಕಾಲೇಜು. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ಸ್ಪಷ್ಟಪಡಿಸಿದರು.
Donate Janashakthi Media

Leave a Reply

Your email address will not be published. Required fields are marked *