ಬೆಂಗಳೂರು : ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಕಲ್ಪಿಸಿದ್ದ ಅವಕಾಶವನ್ನು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ. 30 ಲಕ್ಷ ವಾಹನಗಳ ಮಾಲೀಕರು ದಂಡ ಪಾವತಿಸಿದ್ದಾರೆ. ₹90 ಕೋಟಿಗೂ ಹೆಚ್ಚು ದಂಡ ಸಂಗ್ರಹವಾಗಿದೆ ಎಂದು ಸಂಚಾರ ಪೊಲೀಸ್ ವಿಭಾಗದ ಮೂಲಗಳು ಹೇಳಿವೆ.
ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ
ಕೊನೆಯ ದಿನ ಸರ್ವರ್ ಸಮಸ್ಯೆಯಿಂದಾಗಿ ಹಲವರು ದಂಡ ಪಾವತಿಸಲು ಪರದಾಡಿದರು. ಆಗಸ್ಟ್ 22ರಿಂದ ದಂಡ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಶುಕ್ರವಾರ (ಸೆ.12) ಕೊನೆಯ ದಿನವಾಗಿತ್ತು.
ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಂಡು ವಾಹನ ಮಾಲೀಕರು ದಂಡ ಪಾವತಿಸಿದ್ದಾರೆ.
ಇದನ್ನೂ ನೋಡಿ: ಫ್ಯಾಸಿಸಂ ವಿರುದ್ಧ ವಿಜಯದ 80ನೇ ವಾರ್ಷಿಕೋತ್ಸವ | ಜನತಾ ಪ್ರತಿರೋಧ ಗೆರಿಲ್ಲಾ ಸೈನ್ಯಗಳ ಪಾತ್ರ – ಭಾಗ 3
