ಬೆಂಗಳೂರು: ನಗರ ಒಂದರಲ್ಲೇ ಪ್ರತೀ ವರ್ಷ 943 ಟನ್, ಅಂದರೆ ಹೆಚ್ಚೂ ಕಡಿಮೆ 360 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥಮಾಡುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ʻವಿಶ್ವ ಆಹಾರ ದಿನʼ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತ ಪಡಿಸಿದರು. ವರ್ಷ
ಗೊತ್ತಿದ್ದೂ ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿ ಅವರು ಹೇಳಿದ್ದೂ, ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ ಗಾಂಧಿ ಹೇಳಿದ್ದಾರೆ. ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು. ಅದಕ್ಕೇ ಅನ್ನಭಾಗ್ಯ ಜಾರಿ ಗೊಳಿಸಿದ್ದಾಗಿ ತಿಳಿಸಿದರು. ವರ್ಷ
ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹನಿಗೆ ಮಾಡುವ ಅವಮಾನ ಎಂದರು.
ಇದನ್ನೂ ಓದಿ: ಬಿಜೆಪಿಯಿಂದ ಡಿಸಿಎಂ ಹುದ್ದೆಯ ಆಫರ್ ಬಂದಿತ್ತು; ನಾನು ಜೈಲು ಆಯ್ಕೆ ಮಾಡಿಕೊಂಡೆ: ಡಿಕೆ ಶಿವಕುಮಾರ್
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಬಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಡಾ. ಮನಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು ಎಂದು ಹೇಳಿದರು.
ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.
ಕಾಳ ಸಂತೆ ಮಾರಾಟ, ಕಠಿಣ ಕ್ರಮ
ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದರು.
ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ ನಿಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಇದನ್ನೂ ನೋಡಿ: ವಾರದ ನೋಟ| ಸಿಜೆಐ ಗವಾಯಿಯವರ ಮೇಲೆ ದಾಳಿ ಹಿಂದಿನ ಸೂತ್ರಧಾರಿಗಳಾರು? ಶ್ರೀಪಾದ್ ಭಟ್ Janashakthi Media
