ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಭೋವಿ ನಿಗಮದ ಮೇಲೆ ಇಡಿ ದಾಳಿ ಪ್ರಕರಣ ಸಂಬಂಧ 97 ಕೋಟಿ ರೂ. ಹಣ ದುರುಪಯೋಗವಾಗಿರುವುದಾಗಿ ಜಾರಿ ನಿರ್ದೇಶನಾಲಯ (ED) ಅಧಿಕೃತ ಮಾಹಿತಿ ನೀಡಿದೆ.
ಭೋವಿ ಸಮುದಾಯದ ಏಜೆಂಟರ ಮೂಲಕ ಹಣ ವರ್ಗಾವಣೆ ಆಗಿದೆ. ನಕಲಿ ಫಲಾನುಭವಿಗಳ ಖಾತೆ ಬಳಸಿಕೊಂಡು, ಹಣ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ: ಕಲಬುರಗಿ| ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕ ಬಂಧನ
ಕೆಬಿಡಿಸಿ ಇಂದ ಹಣ ಬೇರೆ ಕಡೆಗೆ ವರ್ಗಾಯಿಸಿರುವುದು ಇಡಿ ತನಿಖೆಯ ವೇಳೆ ಪತ್ತೆಯಾಗಿದೆ. ನಾಗರಾಜಪ್ಪ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿದ್ದು ಪತ್ತೆಯಾಗಿದೆ. ದಾಳಿಯ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಅಡಿ ಇದೀಗ ನಾಗರಾಜಯ್ಯನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ನಕಲಿ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿದ್ದಾರೆ.ಸದ್ಯ ನಾಗರಾಜಪ್ಪನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ ಹೆಚ್ಚಿನ ತನಿಖೆಗಾಗಿ ನಾಗರಾಜಪ್ಪನನ್ನು 14 ದಿನ ವಶಕ್ಕೆ ಪಡೆದಿದೆ.
ಇಡಿ ತನಿಖೆ ವೇಳೆ ಅಕ್ರಮ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ ಎಂದು ಇ.ಡಿ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ನೋಡಿ: ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ ಯಾಕೆ? ಯಾವುದು ವಕ್ಫ್ ಆಸ್ತಿ? ವಕ್ಫ್ ಬೋರ್ಡ್ ಯಾಕೆ ಬೇಕು?Janashakthi Media