ಮರಕುಂಬಿ ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ – 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಜನ ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇವರಿಗೆ ತಲಾ ₹5000 ದಂಡ ಹಾಕಲಾಗಿದೆ.

ಇನ್ನುಳಿದ ಮೂವರು ಅಪರಾಧಿಗಳಿಗೆ ತಲಾ ಎರಡು ಸಾವಿರ ದಂಡ ಹಾಗೂ ಐದು ವರ್ಷ ಶಿಕ್ಷೆ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯ ನ್ಯಾಯಾಧೀಶ ಚಂದ್ರಶೇಖರ ಸಿ. ಆದೇಶ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 117 ಜನ ಆರೋಪಿಗಳಿದ್ದರು. ಇದರಲ್ಲಿ 101 ಜನರ ಮೇಲಿನ ಆರೋಪ ದೃಢಪಟ್ಟಿದೆ. ಇದರಲ್ಲಿ ಕೆಲವರು ಮೃತಪಟ್ಟಿದ್ದಾರೆ. ದಶಕದ ಹಿಂದೆ ಗಂಗಾವತಿಯಲ್ಲಿ ಸಿನಿಮಾ ನೋಡಲು ಹೋಗಿದ್ದಾಗ ಟಿಕೆಟ್‌ ವಿಚಾರಕ್ಕೆ ಆರಂಭವಾಗಿದ್ದ ಜಗಳ ಸಂಘರ್ಷಕ್ಕೆ ಕಾರಣವಾಗಿತ್ತು. ದಲಿತರ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ, ಸಿಪಿಐಎಂ, ದಲಿತ ಹಕ್ಕುಗಳ ಸಮಿತಿ ಹಾಗೂ ಜನಪರ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸಿದ್ದವು.

ಏನಿದು ಪ್ರಕರಣ: ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ 2015ರಲ್ಲಿ ಕ್ಷೌರ ದಂಗಡಿಗೆ ಮತ್ತು ಹೋಟೆಲ್‌ನಲ್ಲಿ ದಲಿತರಿಗೆ ಪ್ರವೇಶ ನೀಡದೆ ಇರುವ ಕುರಿತು ಗಲಾಟೆ ಯಾಗಿತ್ತು. ಇದಾದ ಮೇಲೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಹ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿ ದ್ದರು. ಆದರೆ ಅಂದೇ ರಾತ್ರಿಯ ವೇಳೆ ದಲಿತ ಕೇರಿಗೆ ಸರ್ವಣೀಯರು ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಇದಾದ ಮೇಲೆ ಗ್ರಾಮದ ಸುಮಾರು 117 ಜನರ ವಿರುದ್ಧ ಪ್ರಕರಣ ಪ್ರಕರಣ ದಾಖ ಲಾಗಿತ್ತು. ಪ್ರಕರಣದಲ್ಲಿನ ಆರೋಪಿಗಳಲ್ಲಿ ಕೆಲವರು ಸಾವನ್ನಪ್ಪಿದ್ದಾರೆ. ಈ ಪೈಕಿ 101 ಜನರ ವಿರುದ್ಧ ಆರೋಪ ಸಾಬೀತಾಗಿದೆ.

ಇದನ್ನೂ ಓದಿಮರಕುಂಬಿಯ ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ – 101 ಜನರ ವಿರುದ್ಧದ ಆರೋಪ ಸಾಬೀತು

ಪ್ರಮುಖ ಸಾಕ್ಷಿಯಾಗಿದ್ದ ನಾಯಕನ ಕೊಲೆ : ದಲಿತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಹೋರಾಟ ನಡೆಸಿದ್ದ ಸಿಪಿಐಎಂನ ವೀರೇಶ ಮರಕುಂಬಿಯನ್ನು ಕೊಪ್ಪಳದ ರೈಲು ನಿಲ್ದಾಣದ ಬಳಿ ಕೊಲೆ ಮಾಡಲಾಗಿತ್ತು. ಮರಕುಂಬಿ ಪ್ರಕರಣ ವಿಚಾರಣೆಯಲ್ಲಿದ್ದು, ವೀರೇಶ ಪ್ರಮುಖ ಸಾಕ್ಷಿದಾರರಾಗಿದ್ದರು.  ‘ಪ್ರಕರಣ ಸಂಬಂಧ ಅವರು ಜುಲೈ 10, 2015 ರಂದು ಕೋರ್ಟ್‌ಗೆ ಹಾಜರಾಗಿ ಸಾಕ್ಷಿ ಹೇಳಬೇಕಾಗಿತ್ತು. ಆದರೆ, ಅಂದು ಬೆಳಿಗ್ಗೆಯೇ ಅವರ ಶವ ಕೊಪ್ಪಳದ ಹೊರವಲಯದ ರೈಲು ಹಳಿ ಮೇಲೆ ಪತ್ತೆಯಾಗಿತ್ತು’  ‘ವೀರೇಶ ಅವರನ್ನು ಕೊಲೆ ಮಾಡಿ ಹಳಿ ಮೇಲೆ ಎಸೆಯಲಾಗಿದೆ. ಆದರೆ, ಪೊಲೀಸರು  ಮೃತರ ಪ್ಯಾಂಟಿನಲ್ಲಿ ಡೆತ್‌ನೋಟ್‌ ಇತ್ತು ಎಂದು ಸುಳ್ಳು ಹೇಳುವ ಮೂಲಕ, ಕೊಲೆಯನ್ನು ಆತ್ಮಹತ್ಯೆಯನ್ನಾಗಿ ಬಿಂಬಿಸಿ, ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *