ಭೋಪಾಲ್: ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ ಗುಜರಾತ್, ಜಾರ್ಖಂಡ್ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕನಿಷ್ಠ 26 ಬಾಲಕಿಯರು ಮಧ್ಯಪ್ರದೇಶದ ರಾಜಧಾನಿಯಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕನುಂಗೋ ಅವರು ರಾಜಧಾನಿಯ ಹೊರವಲಯದ ಪರ್ವಾಲಿಯಾ ಪ್ರದೇಶದಲ್ಲಿರುವ ಆಂಚಲ್ ಬಾಲಕಿಯರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.
ಪ್ರಿಯಾಂಕ್ ಕನುಂಗೋ ಅವರು ಶೆಲ್ಟರ್ ಹೋಮ್‌ನ ರಿಜಿಸ್ಟರ್ ಅನ್ನು ಪರಿಶೀಲಿಸಿದ್ದು, ಅದರಲ್ಲಿ 68 ಹುಡುಗಿಯರ ನಮೂದುಗಳಿದ್ದವು. ಆದರೆ ಅವರಲ್ಲಿ 26 ಮಂದಿ ಕಾಣೆಯಾಗಿದ್ದಾರೆ ಎಂದು ಅವರು ಕಂಡುಕೊಂಡಿದ್ದಾರೆ. ನಾಪತ್ತೆಯಾಗಿರುವ ಬಾಲಕಿಯರ ಕುರಿತು ಆಶ್ರಯಧಾಮದ ನಿರ್ದೇಶಕನೊಂದಿಗೆ ಪ್ರಶ್ನಿಸಿದಾಗ ಅವರು ‘ಸಮಾಧಾನಕರ ಉತ್ತರ’ ನೀಡಲಿಲ್ಲ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ | ಉಪ ಮುಖ್ಯಮಂತ್ರಿಯಿದ್ದ ವೇದಿಕೆಯಲ್ಲೆ ಪೊಲೀಸ್ ಅಧಿಕಾರಿಗೆ ಥಳಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್!
ಹುಡುಗಿಯರು ಗುಜರಾತ್, ಜಾರ್ಖಂಡ್ ಮತ್ತು ರಾಜಸ್ಥಾನಕ್ಕೆ ಸೇರಿದವರಾಗಿದ್ದರೆ, ಅವರಲ್ಲಿ ಕೆಲವರು ಮಧ್ಯಪ್ರದೇಶದ ಸೆಹೋರ್, ರೈಸನ್, ಛಿಂದ್ವಾರಾ ಮತ್ತು ಬಾಲಘಾಟ್‌ನ ಬಾಲಕಿಯರು ಕೂಡಾ ಇದ್ದರು ಎಂದು ವರದಿಯಾಗಿದೆ. ಎಫ್‌ಐಆರ್‌ನ ಪ್ರಕಾರ ಈ ಹಾಸ್ಟೆಲ್‌ನಲ್ಲಿ ಹಲವು ಅವ್ಯವಹಾರಗಳು ನಡೆದಿದ್ದು, ಅದೂ ಕೂಡ ಅಕ್ರಮವಾಗಿ ನಡೆಯುತ್ತಿರುವುದು ಕಂಡು ಬಂದಿದೆ.
ಹಾಸ್ಟೆಲ್ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಬೀದಿಗಳಿಂದ ಕೆಲವು ಮಕ್ಕಳನ್ನು ರಕ್ಷಿಸಿದ್ದಾರೆ ಮತ್ತು ಯಾವುದೇ ಪರವಾನಗಿ ಇಲ್ಲದೆ ಆಶ್ರಯ ಮನೆಯನ್ನು ನಡೆಸುತ್ತಿದ್ದಾರೆ ಎಂದು ಕನುಂಗೋ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ರಕ್ಷಿಸಲ್ಪಟ್ಟವರನ್ನು ಈ ಹಾಸ್ಟೆಲ್‌ನಲ್ಲಿ ರಹಸ್ಯವಾಗಿ ಇರಿಸಲಾಗಿದ್ದು, ಕ್ರಿಶ್ಚಿಯನ್ ಧರ್ಮವನ್ನು ಆಚರಿಸುವಂತೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
कल मध्यप्रदेश की राजधानी भोपाल के तारासेवनिया में राज्य बाल आयोग अध्यक्ष व सदस्यों के साथ संयुक्त रूप से एक मिशनरी द्वारा संचालित अवैध बाल गृह का निरीक्षण किया।
यहाँ की संचालक NGO हाल तक सरकारी एजेन्सी की तरह चाइल्ड लाइन पार्ट्नर के रूप में कार्यरत रही है,एवं इसने सरकारी… pic.twitter.com/yVlWt04c90— प्रियंक कानूनगो Priyank Kanoongo (@KanoongoPriyank) January 5, 2024
ಇದನ್ನೂ ಓದಿ: ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ನಿಧನಕ್ಕೆ ಸಿಪಿಐ(ಎಂ) ಮತ್ತು ಡಿವೈಎಫ್‌ಐ ಸಂತಾಪ
“6 ರಿಂದ 18 ವರ್ಷದೊಳಗಿನ ಹೆಚ್ಚಿನ ಹುಡುಗಿಯರು ಹಿಂದೂಗಳು. ಬಹಳ ಕಷ್ಟದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದುರದೃಷ್ಟವಶಾತ್, ಮಧ್ಯಪ್ರದೇಶದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇಂತಹ ಎನ್‌ಜಿಒಗಳಿಂದ ಒಪ್ಪಂದದ ಮೇರೆಗೆ ಮಕ್ಕಳ ಸಹಾಯವಾಣಿ ನಡೆಸಲು ಬಯಸುತ್ತಾರೆ” ಎಂದು ಕನುಂಗೋ ಅವರು ಹೇಳಿದ್ದಾರೆ.
ನಾಪತ್ತೆಯಾದ ಎಲ್ಲ ಹುಡುಗಿಯರು ಮಕ್ಕಳ ಕಲ್ಯಾಣ ಸಮಿತಿಯ ಆದೇಶವಿಲ್ಲದೆ ಅಲ್ಲಿದ್ದರು. ಆದರೆ ಮಕ್ಕಳನ್ನು ರಕ್ಷಿಸಿ ನಂತರ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಹಾಸ್ಟೆಲ್‌ನಲ್ಲಿ ವಿವಿಧ ಧರ್ಮದ ಹೆಣ್ಣುಮಕ್ಕಳು ಇದ್ದಾರೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ. ವಿಶೇಷವೆಂದರೆ ಈ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಇರಲಿಲ್ಲ ಎಂದು ವರದಿಗಳು ಹೇಳಿವೆ. ಇಬ್ಬರು ಮಹಿಳಾ ಭದ್ರತಾ ಸಿಬ್ಬಂದಿಯನ್ನು ಹೊರತುಪಡಿಸಿ ರಾತ್ರಿ ವೇಳೆ ಇಬ್ಬರು ಪುರುಷ ಕಾವಲುಗಾರರಿದ್ದು ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ತಿಳಿದು ಬಂದಿದೆ. ಬಾಲಕಿಯರ ಆಶ್ರಯಧಾಮದಲ್ಲಿ ಮಹಿಳಾ ಸಿಬ್ಬಂದಿ ಮಾತ್ರ ಇರುವುದು ಕಡ್ಡಾಯವಾಗಿದೆ.
ವಿಡಿಯೊ ನೋಡಿ: ಹಿಟ್ & ರನ್ ಪ್ರಕರಣಗಳ ಹೊಸ ಕಾನೂನಿಗೇಕೆ ಇಷ್ಟು ವಿರೋಧ? ಚಾಲಕರಿಗೆ ಇದು ತೂಗುಕತ್ತಿಯೇ? Janashakthi Media