ನವದೆಹಲಿ: ಬಿಹಾರ ಮುಖ್ಯಮಂತ್ರಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬಿಜೆಪಿ ಎನ್ಡಿಎಗೆ ಜೊತೆ ಸೇರಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಇದೇ ಮೊದಲ ಬಾರಿಗೆ ಪ್ರತಿಕ್ರಯೆ ನೀಡಿದ್ದು, ಸಾಮಾಜಿಕ ನ್ಯಾಯ ನೀಡುವ ಜವಾಬ್ದಾರಿಯನ್ನು ‘ಮಹಾಘಟಬಂಧನ್’ ಅನ್ನು ತೆಗೆದುಕೊಂಡಿದ್ದು, ಮಹಾಮೈತ್ರಿಕೂಟಕ್ಕೆ ನಿತೀಶ್ ಕುಮಾರ್ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ರಾಜ್ಯದ ಆಡಳಿತರೂಢ ಮೈತ್ರಿ ಕೂಟವಾಗಿದ್ದ ಮಹಾಘಟಬಂಧನ್ನಲ್ಲಿ ಕಾಂಗ್ರೆಸ್, ಆರ್ಜೆಡಿ ಮತ್ತು ಎಡ ಪಕ್ಷಗಳು ಇನ್ನೂ ಉಳಿದುಕೊಂಡಿವೆ. ನಿತೀಶ್ ಕುಮಾರ್ ಅವರ ಜೆಡಿಯು ಈ ಮಹಾಘಟಬಂಧನ್ನಿಂದ ಹೊರ ಬಂದು ಇದೀಗ ಎನ್ಡಿಎ ಸೇರಿಕೊಂಡಿದ್ದು, ಹೊಸ ಸರ್ಕಾರ ರಚಿಸಿದೆ.
ಇದನ್ನೂ ಓದಿ: ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಕೆ ವಿವಾದ | ಸಿಟಿ ರವಿ ‘ಕೋಮು ಕ್ರಿಮಿ’ ಎಂದ ಕಾಂಗ್ರೆಸ್
ಬಿಹಾರದ ಪೂರ್ಣಿಯಾದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ದೇಶದಲ್ಲಿ ಜಾತಿ-ಗಣತಿಯ ಮಹತ್ವವನ್ನು ಪ್ರಸ್ತಾಪಿಸಿದ್ದಾರೆ. “ದಲಿತರು, ಒಬಿಸಿಗಳು ಮತ್ತು ಇತರ ಜಾತಿಗಳ ನಿಖರವಾದ ಜನಸಂಖ್ಯೆಯನ್ನು ನಿರ್ಧರಿಸಲು ದೇಶಕ್ಕೆ ಜಾತಿ ಆಧಾರಿತ ಜನಗಣತಿ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ನಿರುದ್ಯೋಗ ಮತ್ತು ಆರ್ಥಿಕ ನ್ಯಾಯದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ಆಡಳಿತಾರೂಢ ಬಿಜೆಪಿಯು ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ರಾಜ್ಯಪಾಲರಿಗೆ ಸಿಆರ್ಪಿಎಫ್ Z+ ಭದ್ರತೆ | ಆರಿಫ್ ಖಾನ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ
ಕಾಂಗ್ರೆಸ್ನ ಈ ರ್ಯಾಲಿಯಲ್ಲಿ ನಿತೀಶ್ ಕುಮಾರ್ ಅವರು ಆರ್ಜೆಡಿ ಸಂಸ್ಥಾಪಕ ಹಾಗೂ ರಾಜ್ಯದ ಸಿಎಂ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ ಎಂಬುವುದು ನಿಗದಿಯಾಗಿತ್ತು. ಆದರೆ ಅವರಿಬ್ಬರ ಜೊತೆಗೆ ಲಾಲು ಅವರ ಪುತ್ರ ತೇಜಸ್ವಿ ಯಾದವ್ ಅವರು ಕೂಡಾ ರ್ಯಾಲಿಗೆ ಗೈರು ಹಾಜರಾಗಿದ್ದರು.
ಭೂ-ಉದ್ಯೋಗ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಲಾಲು ಮತ್ತು ತೇಜಸ್ವಿ ಅವರನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಆರ್ಜೆಡಿ ನಾಯಕರು ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಹೇಳಿದೆ.
ವಿಡಿಯೊ ನೋಡಿ: “ರವೀಂದ್ರ ಕಲಾಕ್ಷೇತ್ರಕ್ಕೆ ಆಧುನಿಕ ಸ್ಪರ್ಷ” ಹಿಂದಿರುವ ಹುನ್ನಾರವೇನು? Janashakthi Media