ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8 ಮತ್ತು 9ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯ
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಸಮ್ಮೇಳನ ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು. ‘ಜಿಲ್ಲಾಡಳಿತದ ಸಹಕಾರ ಪಡೆದು ಸಮ್ಮೇಳನ ಆಯೋಜಿಸಬೇಕು. ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು’ ಎಂದೂ ಮುಖ್ಯಮಂತ್ರಿ ಸೂಚಿಸಿದರು.
ಇದನ್ನು ಓದಿ : ಸಿಎಎ ಜಾರಿ ಇಲ್ಲ | ತಮಿಳುನಾಡು ಮತ್ತು ಕೇರಳ ಮುಖ್ಯಮಂತ್ರಿಗಳ ಪುನರುಚ್ಛಾರ
ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಮಾತನಾಡಿ, ‘ಸಮ್ಮೇಳನದಲ್ಲಿ ಕನ್ನಡ ರಥ ಜಾಥಾ, 87 ಸಾಧಕರಿಗೆ ಸನ್ಮಾನ, ಮೂರು ದಿನ ವಿಚಾರಗೋಷ್ಠಿ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದರು. ಅಲ್ಲದೆ, ಸಮ್ಮೇಳನಕ್ಕೆ ₹30 ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗೆ ಅವರು ಮನವಿ ಸಲ್ಲಿಸಿದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಎನ್. ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಇದ್ದರು.
ಇದನ್ನು ನೋಡಿ : ಏನಿದು ಮಧ್ಯಂತರ ಬಜೆಟ್ ? ಚುನಾವಣಾ ರಾಮನ ಮುಂದೆ ಸಪ್ಪೆಯಾದ ಬಜೆಟ್ Janashakthi Media