ಫೆ 12ರಿಂದ ಬಜೆಟ್ ಅಧಿವೇಶನ| ಬೆಳಗ್ಗೆ 9ರಿಂದಲೇ ಕಲಾಪಕ್ಕೆ ಚಿಂತನೆ – ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ವಿಧಾನ ಮಂಡಲ ಜಂಟಿ ಅಧಿವೇಶನ ಫೆಬ್ರವರಿ 12ರಿಂದ ಆರಂಭಗೊಳ್ಳಲಿದ್ದು, 23ರವರೆಗೆ ನಡೆಯಲಿದೆ. ಫೆ.12ರಂದು ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದು, ಫೆ.16ರಂದು ಬಜೆಟ್ ಮಂಡನೆ ನಿರೀಕ್ಷೆಯಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದ‌ರ್ ತಿಳಿಸಿದ್ದಾರೆ. ಫೆ 12ರಿಂದ

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.12ರಿಂದ 15ರವರೆಗೆ ಜಂಟಿ ಅಧಿವೇಶನ ನಡೆಯಲಿದೆ. ರಾಜ್ಯಪಾಲರ ಭಾಷಣ ಬಳಿಕ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ನಂತರ ಬಜೆಟ್ ಮಂಡನೆಯಾಗಿ ಬಜೆಟ್ ಮೇಲಿನ ಚರ್ಚೆ ಮುಂದುವರಿಯಲಿದೆ ಎಂದರು.

ವಿಧಾನ ಮಂಡಲ ಕಲಾಪವನ್ನು ಬೆಳಗ್ಗೆ 10ರಿಂದ 11 ಗಂಟೆ ನಡುವೆ ಆರಂಭಿಸುವ ಬದಲು ಅದಕ್ಕೆ ನಿರ್ದಿಷ್ಟ ಸಮಯದ ಚೌಕಟ್ಟು ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.  ಶಾಸಕರು ಬೆಳಗ್ಗೆ 8 ಗಂಟೆಗೆ ಕಲಾಪಕ್ಕೆ ಸಿದ್ಧವಾಗಿರುತ್ತಾರೆ. ಆದರೆ, ಕಲಾಪ ಆರಂಭಕ್ಕೆ ನಿಗದಿತ ಸಮಯದ ಚೌಕಟ್ಟು ಇಲ್ಲದೇ ಇರುವುದು ಹಲವು ರೀತಿಯ ಸಮಸ್ಯೆಗೆ ಕಾರಣವಾಗಿದೆ. ಕಲಾಪಕ್ಕೆ ಹೊರಟು ಸಿದ್ದವಾದ ಶಾಸಕರು ಊರಿನ ಜನರ ಕಚೇರಿ ಕೆಲಸಕ್ಕೆ ನೆರವಾಗುತ್ತಾರೆ. ಹಾಗಾಗಿ, ವಿಧಾನಸೌಧ, ವಿಕಾಸಸೌಧ ಎಂದು ಸುತ್ತಾಡುತ್ತಾರೆ. ಅಧಿಕಾರಿಗಳ ಬಳಿ ತೆರಳಿ ಕೆಲಸ ಮಾಡಿಸಿಕೊಟ್ಟು ಕಲಾಪಕ್ಕೆ ಹಾಜರಾಗುವಾಗ ವಿಳಂಬವಾಗುತ್ತದೆ ಎಂದು ಹೇಳಿದರು. ಮುಖ್ಯವಾಗಿ ಬೆಳಗ್ಗಿನ ತಿಂಡಿ ಅವಧಿ ಬಳಿಕ ಕಲಾಪದಲ್ಲಿ ಭಾಗವಹಿಸುವ ಶಾಸಕರ ಮೂಡ್ ಕೂಡ ಹೊರಟು ಹೋಗುವ ಸಾಧ್ಯತೆ ಇರುತ್ತದೆ. ಈ ಎಲ್ಲ ಕಾರಣಗಳಿಂದ ಬೆಳಗ್ಗೆ 9 ಗಂಟೆಗೇ ಕಲಾಪ ಆರಂಭಿಸಲು ಚಿಂತನೆ ಮಾಡುತ್ತಿದ್ದೇವೆ ಎಂದರು. ಫೆ 12ರಿಂದ

ಇದನ್ನೂ ಓದಿ : ಬರ ಪರಿಹಾರ, ಕೇಂದ್ರದ ತಾರತಮ್ಯ ನೀತಿ| ದೆಹಲಿಯಲ್ಲಿ ಫೆಬ್ರವರಿ 7 ರಂದು ಕಾಂಗ್ರೆಸ್‌ ಪ್ರತಿಭಟನೆ

ಬಜೆಟ್ ಅಧಿ ವೇಶನಕ್ಕೆ ಪೂರ್ವಭಾವಿಯಾಗಿ ಫೆಬ್ರವರಿ 9ರಂದು ಬೆಂಗಳೂರಿನ ಐಐಎಂನಲ್ಲಿ ಎಲ್ಲ ಶಾಸಕರು ಹಾಗೂ ಪತ್ರಕರ್ತರಿಗೆ ಒಂದು ದಿನದ ವಿಶೇಷ ತರಬೇತಿ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು. ಈ ಬಾರಿ ಬಜೆಟ್ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಪತ್ರಕರ್ತರಿಗೆ ವಿಶೇಷ ತರಬೇತಿ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ತರಬೇತಿಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ನಿವೃತ್ತ ಐಎಎಸ್ ಅಧಿಕಾರಿ ಎಎಸ್ಎ ಪ್ರಸಾದ್ ಭಾಗವಹಿಸಲಿದ್ದಾರೆ. ಈ ಸಂದರ್ಭ ಶಾಸಕರಿಗೆ ಸಂವಿಧಾನ ಕ್ವಿಜ್ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ನೀಡಲಾಗುವುದು ಎಂದರು. ಫೆ 12ರಿಂದ

ಈ ವಿಡಿಯೋ ನೋಡಿ : ಲಿಂಗಾಯತರು ಮಾಂಸ ತಿನ್ನೋದ ಬಿಟ್ಟರೆ ಮಾತ್ರ ಲಿಂಗ ದೀಕ್ಷಾ ಕೊಡತೀವಿ ಅಂತ ಯಾಕೆ ಹೇಳತೀರಿ ?

 

Donate Janashakthi Media

Leave a Reply

Your email address will not be published. Required fields are marked *