ಮಧ್ಯಪ್ರದೇಶ | ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಸಾವು, 80 ಅಧಿಕ ಮಂದಿಗೆ ಗಾಯ

ಭೋಪಾಲ್: ಮಧ್ಯ ಪ್ರದೇಶದ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 80 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಭಯಾನಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಓಡುತ್ತಿರುವುದು ದಾಖಲಾಗಿದೆ.

ಮಧ್ಯಪ್ರದೇಶದ ಹರ್ದಾದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. “ಇದುವರೆಗೆ ಎಂಟು ಸಾವುಗಳು ಮತ್ತು ಸುಮಾರು 80 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಮಹೋಬಿಯಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಸಿಎಂನಿಂದ ಸೋನಿಯಾ ಗಾಂಧಿ ಭೇಟಿ | ರಾಜ್ಯದಿಂದ ಚುನಾವಣೆ ಸ್ಪರ್ಧಿಸುವಂತೆ ವಿನಂತಿಸಿದ ರೇವಂತ್ ರೆಡ್ಡಿ

ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು “ಮಧ್ಯಪ್ರದೇಶದ ಹರ್ದಾದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ” ಎಂದು ಪ್ರಧಾನಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಹರ್ದಾ ಜಿಲ್ಲಾಧಿಕಾರಿ ರಿಷಿ ಗಾರ್ಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಘಟನೆಯ ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. “ಇಂದು ಬೆಳಿಗ್ಗೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆರು ಸಾವು ದೃಢಪಟ್ಟಿದೆ ಮತ್ತು 59 ಇತರರು ಗಾಯಗೊಂಡಿದ್ದಾರೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಹರ್ದಾ ಜಿಲ್ಲಾಧಿಕಾರಿ ರಿಷಿ ಗಾರ್ಗ್ ಹೇಳಿದ್ದರು.  ಪಟಾಕಿ ಕಾರ್ಖಾನೆ ಸುತ್ತಮುತ್ತ ಹಲವಾರು ಮಂದಿ ಸಿಲುಕಿರುವ ಶಂಕೆ ಇದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಗುಜರಾತ್ | ಬಿಜೆಪಿ ಶಾಸಕನ ಶೈಕ್ಷಣಿಕ ಅರ್ಹತೆ ಪ್ರಶ್ನಿಸಿದ ಪತ್ರಕರ್ತೆ ವಿರುದ್ಧ ಎಫ್‌ಐಆರ್

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಪುನರಾವರ್ತಿತ ಸ್ಫೋಟದ ಶಬ್ದಗಳು ಪಕ್ಕದ ಪ್ರದೇಶಗಳ ವರೆಗೂ ಕೇಳಿಸುತ್ತಿತ್ತು ಎಂದು ವರದಿಯಾಗಿತ್ತು. ಹರ್ದಾ ನಗರದಿಂದ 2 ಕಿ.ಮೀ ದೂರದಲ್ಲಿರುವ ಮಗರ್ಧ ರೋಡ್ ಕಾರ್ಖಾನೆಯಲ್ಲಿರುವ ಕಾರ್ಖನೆಯಲ್ಲಿ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಇದುವರೆಗೆ ಸುಮಾರು 25 ಜನರನ್ನು ಗಾಯಗೊಂಡಿದ್ದಾರೆ ಎಂದು ಎಂದು ಜಿಲ್ಲಾಧಿಕಾರಿ ಹೇಳಿದ್ದರು. ಅಗ್ನಿಶಾಮಕ ದಳದವರು ಮಾತ್ರವಲ್ಲದೆ, ಆಂಬುಲೆನ್ಸ್‌ಗಳು ಮತ್ತು ವೈದ್ಯರ ತಂಡಗಳನ್ನು ಸಹ ಪಕ್ಕದ ಜಿಲ್ಲೆಗಳು ಮತ್ತು ಇಂದೋರ್‌ನಿಂದ ಕರೆಸಲಾಗಿತ್ತು ಎಂದು ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸಲು NDRF ಮತ್ತು SDRF ತಂಡಗಳನ್ನು ಸಹ ಹಾರ್ದಾಗೆ ಧಾವಿಸಲಾಗುತ್ತಿದ್ದು, ಇಲ್ಲಿಯವರೆಗೆ 20-25 ಜನರನ್ನು ಹರ್ದಾದಲ್ಲಿನ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ, ಅವರಲ್ಲಿ ಹಲವರು ಗಂಭೀರರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಹರ್ದಾ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮನೀಶ್ ಶರ್ಮಾ ಮಾತನಾಡಿ, ತಮ್ಮ ಆಸ್ಪತ್ರೆಯು ಸಾವುನೋವುಗಳ ಪ್ರವಾಹದಿಂದ ತುಂಬಿದೆ ಎಂದು ಹೇಳಿದ್ದಾರೆ. “ನಮ್ಮ ಆಸ್ಪತ್ರೆಯಲ್ಲಿ ನಾವು ಎಂಟು ಸಾವುಗಳು ಸಂಭವಿಸಿದೆ. ಇಲ್ಲಿಯವರೆಗೆ ಒಟ್ಟು 90 ಜನರನ್ನು ಇಲ್ಲಿ ದಾಖಲಿಸಲಾಗಿದ್ದು, ಅವರಲ್ಲಿ 15 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾವು ದೊಡ್ಡ ಆಸ್ಪತ್ರೆಗೆ ಕಳುಹಿಸಿದ್ದೇವೆ ಉಲ್ಲೇಖಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಚಂಡೀಗಢ ಮೇಯರ್‌ ಚುನಾವಣೆಯಲ್ಲಿ ಮತ ತಿರುಚಿದ ಚುನಾವಣಾ ಅಧಿಕಾರಿ – ವಿಡಿಯೋ ಬಹಿರಂಗ! Janashakthi Media

Donate Janashakthi Media

Leave a Reply

Your email address will not be published. Required fields are marked *