ಇಸ್ಲಾಂಗೆ ಮತಾಂತರಗೊಂಡವರಿಗೂ ಮೀಸಲಾತಿ ವಿಸ್ತರಣೆ ಬಗ್ಗೆ ಚಿಂತನೆ – ತಮಿಳುನಾಡು ಸಿಎಂ

ಚೆನ್ನೈ: ಇಸ್ಲಾಂಗೆ ಮತಾಂತರಗೊಂಡ ಹಿಂದುಳಿದ ವರ್ಗ, ಅತ್ಯಂತ ಹಿಂದುಳಿದ ವರ್ಗ ಮತ್ತು ಅಧಿಸೂಚಿತ ಸಮುದಾಯಗಳಿಗೆ ಮೀಸಲಾತಿಯನ್ನು ವಿಸ್ತರಿಸುವ ಬಗ್ಗೆಗಿನ ಮನವಿಯನ್ನು ರಾಜ್ಯ ಸರ್ಕಾರ ಪರಿಗಣಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಘೋಷಿಸಿದ್ದಾರೆ.

ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಮನಿತನೇಯ ಮಕ್ಕಳ್ ಕಚ್ಚಿ (ಎಂಎಂಕೆ) ಪಕ್ಷದ ನಾಯಕ ಎಂ.ಎಚ್. ಜವಾಹರುಲ್ಲಾ ಅವರ ಮನವಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಜವಾಹರುಲ್ಲಾ ಅವರು ಇಸ್ಲಾಂಗೆ ಮತಾಂತರಗೊಂಡ ಹಿಂದುಳಿದ ವರ್ಗ, ಅತ್ಯಂತ ಹಿಂದುಳಿದ ವರ್ಗ ಮತ್ತು ಅಧಿಸೂಚಿತ ಸಮುದಾಯಗಳ ಸದಸ್ಯರಿಗೆ ಮೀಸಲಾತಿ ನಿರಾಕರಣೆಯ ಮಾಡಿರುವ ಬಗ್ಗೆ ಗಮನಸೆಳೆದಿದ್ದರು.

ಇದನ್ನೂ ಓದಿ: ‘ಮಂಡ್ಯ ನೆಲಕ್ಕೆ ಕಿವಿಗೊಟ್ಟು ಆಲಿಸಿದಾಗ…’ – ಹಿರಿಯ ಸಾಹಿತಿ ದೇವನೂರ ಮಹಾದೇವ ಭಾಷಣ

ಆದಿ ದ್ರಾವಿಡರ್, ಹಿಂದುಳಿದ ವರ್ಗ, ಅತ್ಯಂತ ಹಿಂದುಳಿದ ವರ್ಗ ಮತ್ತು ಅಧಿಸೂಚಿತ ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಉನ್ನತೀಕರಿಸಲು ತೆಗೆದುಕೊಂಡ ಕ್ರಮಗಳಂತೆ ಅವರ ಹಿತಾಸಕ್ತಿಗಳನ್ನು ರಕ್ಷಿಸಲು ಡಿಎಂಕೆ ಸರ್ಕಾರವು ವಿನಂತಿಯನ್ನು ಪರಿಗಣಿಸುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಫೆಬ್ರವರಿ 12 ರಂದು ರಾಜ್ಯಪಾಲ ಆರ್.ಎನ್. ರವಿ ರಾಜ್ಯ ಸರ್ಕಾರ ನೀಡುವ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸಿದ್ದರು. ರಾಜ್ಯಪಾಲರ ಈ ನಡವಳಿಯ ಬಗ್ಗೆ ಗುರುವಾರ ಅಧಿವೇಶನದಲ್ಲಿ ಟೀಕಿಸಿದ ಎಂಕೆ ಸ್ಟಾಲಿನ್ ಅವರು, ಇದು ಅವರ ರಾಜಕೀಯ ಕಾರ್ಯಸೂಚಿಯೊಂದಿಗೆ ಹೊಂದಿಕೆಯಾಗುತ್ತಿದೆ ಎಂದು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ರಾಜ್ಯದ ಮುಖ್ಯಸ್ಥರು ವರ್ಷದ ಆರಂಭದಲ್ಲಿ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವ ಸಂಪ್ರದಾಯವನ್ನು ಒತ್ತಿ ಹೇಳಿದ್ದಾರೆ. ಸಚಿವ ಸಂಪುಟ ಸಿದ್ಧಪಡಿಸಿರುವ ಸರಕಾರದ ನೀತಿ ದಾಖಲೆಯನ್ನು ರಾಜ್ಯಪಾಲರು ಓದಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

2023 ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದರು. 2022 ರಲ್ಲಿ ಮೋದಿ ಸರ್ಕಾರವು ಭಾರತದ ಸುಪ್ರೀಂ ಕೋರ್ಟ್‌ಗೆ ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಲಾಗುವುದಿಲ್ಲ ಎಂದು ಹೇಳಿತ್ತು.

ವಿಡಿಯೊ ನೋಡಿ: ಕರ್ನಾಟಕದ 2024-25 ಬಜೆಟ್ ನ ಆಳ ಅಗಲವೇನು? Janashakthi Media

Donate Janashakthi Media

Leave a Reply

Your email address will not be published. Required fields are marked *