ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಡಿವೈಎಫ್‌ಐನ 12 ನೇ ರಾಜ್ಯ ಸಮ್ಮೇಳನ

ಮಂಗಳೂರು :  ಡಿವೈಎಫ್ಐ 12ನೇ ಕರ್ನಾಟಕ ರಾಜ್ಯ ಸಮ್ಮೇಳನವು ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 25, 26, 27-2024 ರಂದು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ ನಡೆಯಲಿದೆ. ಸಾಮರಸ್ಯ

ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿವೈಎಫ್‌ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್‌ಕುಮಾರ್‌ ಬಜಾಲ್‌ ಮಾತನಾಡಿ, ಭಾರತದ ಸ್ವಾತಂತ್ರ್ಯ ಹೋರಾಟದ ಹುತಾತ್ಮ ವೀರರಾದ ಭಗತ್ ಸಿಂಗ್,‌ ಚಂದ್ರಶೇಖರ್ ಆಜಾದ್, ಅಶ್ಪಾಕುಲ್ಲಾ ಖಾನ್ , ಮೊದಲಾದ ಕ್ರಾಂತಿಕಾರಿಗಳ ಆಶಯದೊಂದಿಗೆ ಪಂಜಾಬಿನ ಲೂಧಿಯಾನದಲ್ಲಿ 1980 ರಲ್ಲಿ ಸ್ಥಾಪನೆಯಾಗಿ ಕಳೆದ 44 ವರ್ಷಗಳಿಂದ “ಸರ್ವರಿಗೂ ಶಿಕ್ಷಣ ಸರ್ವರಿಗೂ ಉದ್ಯೋಗ” ಎಂಬ ಘೋಷಣೆ ಅಡಿಯಲ್ಲಿ ಮಾನವ ಪ್ರೇಮಿ ಸಂಘಟನೆಯಾಗಿ ಡಿವೈಎಫ್‌ಐ ಕೆಲಸ ಮಾಡುತ್ತಿದೆ.  ಅಲ್ಪಸಂಖ್ಯಾತ, ದಲಿತ, ಆದಿವಾಸಿ ಸಮುದಾಯಗಳು ಸೇರಿದಂತೆ ದಮನಿತರ ಪರವಾಗಿ ಅಧಿಕಾರಶಾಹಿಗಳ ಎದುರಾಗಿ ಅಗಣಿತ ಹೋರಾಟಗಳನ್ನು ನಡೆಸುತ್ತಾ ಬಂದಿದೆ. ಕೋಮುವಾದಕ್ಕೆ ಎದುರಾಗಿ ಸೌಹಾರ್ದತೆ, ಜಾತ್ಯಾತೀತ ಮೌಲ್ಯಗಳ ರಕ್ಷಣೆಗಾಗಿ ರಾಜಿ ರಹಿತ ಹೋರಾಟಗಳನ್ನು ನಡೆಸುತ್ತಾ ಬಂದಿದ್ದು ಬಳ್ಳಾರಿ ಉಕ್ಕಿನ ಕೈಗಾರಿಕೆಯ ಸ್ಥಾಪನೆಗಾಗಿ “ವಿಜಯನಗರದ ಉಕ್ಕು ಕರ್ನಾಟಕದ ಹಕ್ಕು” ಎಂಬ ಘೋಷಣೆಯೊಂದಿಗೆ ಉದ್ಯೋಗದ ಹಕ್ಕಿಗಾಗಿ ನಡೆದ ಐತಿಹಾಸಿಕ ಹೋರಾಟ, ಗ್ರಾಮೀಣ ಕೃಪಾಕ ನೌಕರರ ಹೋರಾಟ, ಸಾಕ್ಷರತಾ ಪ್ರೇರಕರ ಚಳುವಳಿ, ಬಾಬಾ ಬುಡನ್ ಗಿರಿಯ ಸೌಹಾರ್ದ ಪರಂಪರೆಯ ರಕ್ಷಣೆಗಾಗಿ ನಡೆದ ಚಳುವಳಿಗಳಲ್ಲಿ ಡಿವೈಎಫ್‌ಐ ಮುಂಚೂಣಿಯಲ್ಲಿತ್ತು ಎಂದರು.

ಸ್ವಾಗತ ಸಮಿತಿ ಅಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಡಿವೈಎಪ್ಐ ತನ್ನ ಆರಂಭದ ಕಾಲದಿಂದಲೂ ಕಾರ್ಯಾಚಾರಿಸುತ್ತಿದ್ದು ಶಿಕ್ಷಣ, ಆರೋಗ್ಯದ ವ್ಯಾಪಾರಿಕರಣದ ಎದುರಾಗಿ,‌ ಉದ್ಯೋಗ ಮತ್ತು ಆರೋಗ್ಯದ ಹಕ್ಕುಗಳಿಗಾಗಿ, ಕುಡಿಯುವ ನೀರಿನ ಖಾಸಗಿಕರಣದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೃಹತ್ ಕೈಗಾರಿಕೆಗಳು ಇಲ್ಲಿನ ನೆಲ, ಜಲ ಪರಿಸರವನ್ನು ಮಾಲಿನ್ಯಗೊಳಿಸುವುದರ ವಿರುದ್ಧ , ಸುರತ್ಕಲ್ ಅಕ್ರಮ ಟೋಲ್ ಗೇಟ್ ನ ತೆರವಿಗಾಗಿ ಹೀಗೆ ಅನೇಕ ಹೋರಾಟಗಳನ್ನು ನಡೆಸಿದೆ‌ ಎಂದರು. ಸಾಮರಸ್ಯ

ವಿವರಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ :    ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ

ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಮೊದಲ ಎರಡು ದಿನ ಪ್ರತಿನಿಧಿ ಅಧಿವೇಶನ ನಡೆಯಲಿದ್ದು ರಾಜ್ಯದ ಪ್ರತಿ ಜಿಲ್ಲೆಗಳಿಂದಲೂ  ಮುನ್ನೂರಕ್ಕೂ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.  ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ರವರು ಉದ್ಘಾಟಿಸಲಿದ್ದು ಮುಖ್ಯ ಅತಿಥಿಗಳಾಗಿ ಡಿವೈಎಫ್ಐ ಅಖಿಲ ಭಾರತ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಕಾಂ.ಎಎ ರಹೀಮ್ ರವರು ಭಾಗವಹಿಸಲಿದ್ದಾರೆ. 12ನೇ ಕರ್ನಾಟಕ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿರುವ ವಿಶ್ರಾಂತ ಜಿಲ್ಲಾಧಿಕಾರಿಗಳು ಆಗಿರುವ ಎ.ಬಿ ಇಬ್ರಾಹಿಂ ಐಎಎಸ್ ಸ್ವಾಗತ ಭಾಷಣ ಮಾಡಲಿದ್ದಾರೆ ಎಂದು ಸಂಘಟನೆಯ ನಾಯಕರು ತಿಳಿಸಿದರು.

ಫೆಬ್ರವರಿ 26 ರಂದು ಬೆಳಗ್ಗೆ 10:30 ಕ್ಕೆ ದೆಹಲಿ ಜೆಎನ್ ಯು ವಿವಿ ಯ ವಿಶ್ರಾಂತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರಿಂದ “ಕರಾವಳಿ ಕಟ್ಟಿದ ಬಗೆ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನಡೆಯಲಿದೆ.

ಯೂಥ್ ಮಾರ್ಚ್ :  ಡಿವೈಎಫ್ಐ ಹನ್ನೆರಡನೇ ರಾಜ್ಯ ಸಮ್ಮೇಳನದ ಸಮಾರೋಪವು 27.02.2024 ರಂದು ನಡೆಯಲಿದ್ದು ಆ ದಿನ ಸಂಜೆ 3 ಗಂಟೆಗೆ ಕುತ್ತಾರ್ ಜಂಕ್ಷನ್ ನಿಂದ ಕಲ್ಲಾಪು ಯುನಿಟಿ ಹಾಲ್ ಮೈದಾನದ ವರೆಗೆ ಯುವಜನರ ವರ್ಣರಂಜಿತ ಮೆರವಣಿಗೆ ನಡೆಯಲಿದ್ದು ಯೂತ್ ಮಾರ್ಚ್ಗೆ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸುವ ನಿರೀಕ್ಷೆ ಇದೆ. ಸೌಹಾರ್ದತೆಯನ್ನು ಸಾರುವ ಟ್ಯಾಬ್ಲೋಗಳು. ಡಾ. ಅಂಬೇಡ್ಕರ್, ಮಹಾತ್ಮ ಗಾಂಧಿ, ಭಗತ್ ಸಿಂಗ್, ನಾರಾಯಣ ಗುರು, ಕೋಟಿ-ಚೆನ್ನಯ, ಕುದ್ಮಲ್ ರಂಗರಾವ್, ವಸಾಹತು ಆಕ್ರಮಣದ ವಿರುದ್ಧ ಸೈನ್ಯ ಕಟ್ಟಿ ಹೋರಾಡಿದ ಟಿಪ್ಪು ಸುಲ್ತಾನ್, ರಾಣಿ ಅಬ್ಬಕ್ಕ, ಅಮರ ಸುಳ್ಳ ವೀರರ ಭಾವಚಿತ್ರಗಳ ಮೆರವಣಿಗೆ, ಚೆಂಡೆ, ಬ್ಯಾಂಡ್ ಸೆಟ್, ವೇಷಭೂಷಣಗಳ ಜೊತೆಗೆ ಯುವಜನರ ಆಕರ್ಷಕ ಪಥ ಸಂಚಲನ ನಡೆಯಲಿದೆ.

ಅಂದು ಸಂಜೆ ನಡೆಯುವ ಬಹಿರಂಗ ಸಭೆ ಬಹುಭಾಷಾ ನಟ ಕಾಶ್ ರೈ, ರಾಜ್ಯಸಭಾ ಸದಸ್ಯರು ಹಾಗೂ ಡಿವೈಎಫ್ಐ ನ ಅಖಿಲ ಭಾರತ ಅಧ್ಯಕ್ಷರಾಗಿರುವ ಎಎ ರಹೀಂ ರವರುಗಳು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಸಾಮರಸ್ಯ

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಡಾ| ಕೃಷ್ಣಪ್ಪ ಕೊಂಚಾಡಿ, ಪ್ರಧಾನ ಕಾರ್ಯದರ್ಶಿ  ಸಂತೋಷ್ ಬಜಾಲ್ , ಖಜಾಂಚಿ ಬಿ.ಕೆ ಇಮ್ತಿಯಾಜ್ , ಮುಖಂಡರಾದ ನವೀನ್ ಕೊಂಚಾಡಿ,‌ ಮನೋಜ್ ವಾಮಂಜೂರು, ರಿಜ್ವಾನ್ ಹರೇಕಳ ಮತ್ತಿತರರು ಉಪಸ್ಥಿತರಿದ್ದರು.

 

Donate Janashakthi Media

Leave a Reply

Your email address will not be published. Required fields are marked *