ಹೊಸದಿಲ್ಲಿ: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ರಾಜ್ಯಸಭೆಗೆ
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. “ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ಪ್ರಬಲ ಸಾಕ್ಷಿಯಾಗಿದೆ. ನಾರಿ ಶಕ್ತಿ’, ನಮ್ಮ ದೇಶದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ರಾಜ್ಯಸಭೆ ಸದಸ್ಯೆಯಾಗಿ ಅವರ ಮುಂದಿನ ಪಯಣ ಶುಭಕರವಾಗಿರಲಿ.” ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಸಂಸತ್ನ ಮೇಲ್ಮನೆಗೆ 12 ಸದಸ್ಯರನ್ನು ರಾಷ್ಟ್ರಪತಿ ನೇರವಾಗಿ ನಾಮನಿರ್ದೇಶನ ಮಾಡುತ್ತಾರೆ. ಕಲೆ, ಸಾಹಿತ್ಯ, ವಿಜ್ಞಾನ, ಸಮಾಜ ಸೇವೆ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಮಹತ್ತರ ಕೊಡುಗೆ ಸಲ್ಲಿಸಿದವರಿಗೆ ಈ ಗೌರವ ನೀಡಲಾಗುತ್ತದೆ.