ಬೆಂಗಳೂರು : “ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಜೆಪಿ
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಕುಡಿಯುವ ನೀರಿನ ಅಭಾವದ ಬಗ್ಗೆ ಬಿಜೆಪಿ ನಾಯಕರ ಟೀಕೆ ಕುರಿತು ಮಾತನಾಡಿದ್ದಾರೆ. ಬಿಜೆಪಿ
“ವಿರೋಧ ಪಕ್ಷದವರಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ನೇನು ಇಲ್ಲ. ಅವರು ರಚನಾತ್ಮಕ ಸಲಹೆ ಕೊಟ್ಟರೆ ನಾವು ಸ್ವೀಕರಿಸಲು ಸಿದ್ಧ. ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಖಾಸಗಿ ಟ್ಯಾಂಕರ್ ಗಳನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡು ಮಾಫಿಯಾ ತಡೆಗಟ್ಟಿದೆ ಎಂದು ಹೇಳಿದರು.
ಶೇಕಡಾ 50ರಷ್ಟು ಕೊಳವೆಬಾವಿಗಳು ಬರಿದಾಗಿದೆ. ಸಾವಿರಾರು ಟ್ಯಾಂಕರ್ ಗಳನ್ನು ನಾವು ನಿಯಂತ್ರಣಕ್ಕೆ ತೆಗೆದುಕೊಂಡು ನೀರಿನ ಮೂಲಗಳಿರುವ ಕಡೆಗಳಿಂದ ನೀರನ್ನು ಪೂರೈಸಲು ನಿರ್ಧರಿಸಲಾಗಿದೆ.
ದೂರದಿಂದ ನೀರು ಪೂರೈಸುವ ಕಾರಣ ಟ್ಯಾಂಕರ್ ನೀರಿನ ದರ ನಿಗಧಿಯ ನಿರ್ಧಾರವನ್ನು ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಇನ್ನು ರಾಜ್ಯದಲ್ಲಿ ಖಾಲಿ ಇರುವ ದೊಡ್ಡ ಹಾಲಿನ ಟ್ಯಾಂಕರ್ ಗಳನ್ನ ನೀರು ಪೂರೈಸಲು ಬಳಸಲಾಗುವುದು.
ಕಾವೇರಿ ನೀರನ್ನು ಸಮರ್ಪಕವಾಗಿ ಪೂರೈಸಲಾಗುತ್ತಿದೆ. ಇನ್ನು ಬೆಂಗಳೂರಿನ ಹೊರವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರು ಪೂರೈಕೆ ಮೇ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದರು.
ಇದನ್ನು ಓದಿ : ನಿಮ್ಮದು ನಮ್ಮ ಪರಿವಾರ ಅಲ್ಲ, ನಿಮ್ಮದು ಸಂಘಪರಿವಾರ – ಪ್ರಕಾಶ್ ರೈ
ಮಾಧ್ಯಮಗಳಲ್ಲಿ ನೀರಿನ ಹಾಹಾಕಾರದ ಬಗ್ಗೆ ತೋರಿಸುತ್ತಿದ್ದೀರಿ. ಕೊಳವೆ ಬಾವಿಗಳು ಬತ್ತಿದಾಗ ಹಾಹಾಕಾರಾ ಉದ್ಭವಿಸುತ್ತದೆ. ನಾವು ನೀರು ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದೇವೆ.
ಈ ಪರಿಸ್ಥಿತಿಯಲ್ಲಿ ಕುಡಿಯುವ ನೀರನ್ನು ಕಾರು, ವಾಹನ ತೊಳೆಯಲು ಹಾಗೂ ಇತರೆ ಬಳಕೆಗೆ ಬಳಸಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ. ನೀರಿನ ಬೆಲೆ ಎಲ್ಲರಿಗೂ ಅರ್ಥವಾಗಬೇಕು.
ನಾವು ಮೇಕೆದಾಟು ಯೋಜನೆ ಯಾವ ಕಾರಣಕ್ಕೆ ಹೋರಾಟ ಮಾಡಿದೆವು? ಈ ಕಾರಣಕ್ಕೆ ಹೋರಾಟ ಮಾಡಿದ್ದೆವು. ಕಾವೇರಿ ನೀರನ್ನು ನಾವು ಹೆಚ್ಚಾಗಿಯೇ ಬಳಸಿಕೊಳ್ಳುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.
ನೀರಿನ ಸಮಸ್ಯೆ ಬಗೆಹರಿಸುತ್ತೇವೆ:
ಖಾಸಗಿ ಟ್ಯಾಂಕರ್ ಗಳಿಗೆ ಸಿಗುವ ನೀರು ಸರ್ಕಾರಕ್ಕೆ ಯಾಕೆ ಸಿಗುತ್ತಿಲ್ಲ ಎಂದು ಸಾರ್ವಜನಿಕ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಖಾಸಗಿ ಟ್ಯಾಂಕರ್ ಗಳು ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸುತ್ತಿವೆ. ಸರ್ಕಾರದ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಪೂರೈಸಲಾಗುತ್ತಿದೆ. ದುರಸ್ತಿ ಇದ್ದ ಘಟಕಗಳನ್ನು ರಿಪೇರಿ ಮಾಡುತ್ತಿದ್ದೇವೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ನಮಗೆ ನೀರಿನ ಬೆಲೆ ಗೊತ್ತಿದೆ” ಎಂದು ತಿಳಿಸಿದರು.
ಗ್ರಾಮಾಂತರ ಜಿಲ್ಲೆ ಕೊಳವೆ ಬಾವಿ ಮೇಲೆ ಅವಲಂಬಿತ, ಹೀಗಾಗಿ ನೋಡಲ್ ಅಧಿಕಾರಿ ನೇಮಕ
ಬೆಂಗಳೂರು ಗ್ರಾಮಾಂತರ ಭಾಗದ ವಾರ್ಡ್ ಗಳಿಗೆ ನೋಡಲ್ ಅಧಿಕಾರಿ ನೇಮಿಸಿದ್ದು, ಬೇರೆ ಭಾಗಗಳಲ್ಲಿ ಯಾಕೆ ನೇಮಿಸಿಲ್ಲ ಎಂದು ಕೇಳಿದಾಗ, “ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಭಾಗ ಸಂಪೂರ್ಣವಾಗಿ ಕೊಳವೆ ಬಾವಿಗಳ ಮೇಲೆ ಅವಲಂಬಿತವಾಗಿವೆ. ಬೆಂಗಳೂರು ನಗರ ಕಾವೇರಿ ನೀರನ್ನು ಅವಲಂಬಿಸಿದೆ. ಬೆಂಗಳೂರು ಗ್ರಾಮಾಂತರದಿಂದಲೇ ಹೆಚ್ಚು ಟ್ಯಾಂಕರ್ ಮೂಲಕ ನೀರು ಬರುತ್ತಿದೆ” ಎಂದು ತಿಳಿಸಿದರು.
ಸೋಮವಾರ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಅವರು ಮಾಡಲಿ” ಎಂದು ತಿಳಿಸಿದರು.
ಇದನ್ನು ನೋಡಿ : ಭಾರತದಲ್ಲಿ ಬಡವರ ಸಂಖ್ಯೆ ಕೇವಲ 2.7 ಕೋಟಿ ಎಂದು ಬೂಸಿ ಬಿಟ್ಟ ನಿತಿ ಆಯೋಗ, ನಿಜಾಂಶವೇನು? Janashakthi Media