ನವದೆಹಲಿ :ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಮುಂದಾಗಿದೆ.
ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ನಿಯಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಸೋಮವಾರ ಅಧಿಸೂಚನೆ ಪ್ರಕಟಿಸಿದೆ.
ಆನ್‌ಲೈನ್ ಅರ್ಜಿ ಸಲ್ಲಿಸುವುದಕ್ಕೆ ಕೇಂದ್ರ ಸರ್ಕಾರವು ಪೋರ್ಟಲ್ ಅನ್ನು ತೆರೆದಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಂಬಂಧ ಕೆಲವು ದಿನಗಳ ಹಿಂದೆ, ‘ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ಜಾರಿಗೆ ತರಲಾಗುವುದು’ ಎಂದು ಹೇಳಿದ್ದರು.
2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಸಂಸತ್ತಿನಲ್ಲಿ ಅನುಮೋದನೆಯಾದಾಗ, ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ದೆಹಲಿ ಸೇರಿದಂತೆ ಅನೇಕ ಕಡೆ ಪ್ರತಿಭಟನೆಕಾರ ಮೇಲೆ ಕೇಂದ್ರ ಸರ್ಕಾರ ಹಿಂಸಾತ್ಮಕ ದಾಳಿ ನಡೆಸಿತ್ತು.
ಬಿಜೆಪಿಯೇತರ ರಾಜ್ಯಗಳಲ್ಲಿ ಪೌರತ್ವ ಕಾಯ್ದೆ ವಿರುದ್ದ ಸಂಘರ್ಷಾತ್ಮಕ ಪ್ರತಿಭಟನೆ ನಡೆದಿತ್ತು.ಪ್ರತಿಭಟನೆಯಲ್ಲಿ ಕನಿಷ್ಠ 100 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಈ ಕಾನೂನಿನಂತೆ ಡಿಸೆಂಬರ್ 31, 2014ಕ್ಕಿಂತ ಮುಂಚೆ ಭಾರತಕ್ಕೆ ವಲಸೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಗಾನಿಸ್ತಾನದ ಹಿಂದೂ ಸಿಖ್, ಜೈನ, ಕ್ರೈಸ್ತ, ಬೌದ್ಧ ಮತ್ತು ಪಾರ್ಸಿ ಸಮುದಾಯದ ಮಂದಿಗೆ ಭಾರತದ ಪೌರತ್ವ ನೀಡಬಹುದಾಗಿದೆ.