ಯಡಿಯೂರಪ್ಪ ಪೋಕ್ಸೋ ಪ್ರಕರಣ : ರಾಜಕೀಯ ದುರುದ್ದೇಶ ಇಲ್ಲ – ಪರಮೇಶ್ವರ್‌

ಬೆಂಗಳೂರು: ಮಹಿಳೆಯೊಬ್ಬರು ನೀಡಿದ ದೂರಿನ‌ ಮೇಲೆ ಮಾಜಿ ಸಿಎಂ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಯಡಿಯೂರಪ್ಪ

ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಳೆದ ರಾತ್ರಿ 10 ಗಂಟೆಯ ಸುಮಾರಿಗೆ ಮಹಿಳೆಯೊಬ್ಬರು ಬಿಎಸ್ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮಾಡುವ ತನಕ ಏನೂ ಹೇಳಲು ಆಗುವುದಿಲ್ಲ. ಕೆಲವರು ಆ ಮಹಿಳೆಗೆ ಮಾನಸಿಕ ಅಸ್ವಸ್ಥತೆ ಇದೆ ಎಂದು ಹೇಳುತ್ತಾರೆ. ಮಹಿಳೆ ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಕೈಯ್ಯಲ್ಲಿ ಬರೆದು ಕೊಟ್ಟಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತನಿಖೆ ಬಗ್ಗೆ ಈಗಲೇ ಏನು ಹೇಳಲು ಆಗುವುದಿಲ್ಲ‌. ಇದು ಮಾಜಿ ಸಿಎಂಗೆ ಸಂಬಂಧಿಸಿದ ವಿಚಾರ. ಅತಿ ಸೂಕ್ಷ್ಮ ವಿಚಾರ. ಹಾಗಾಗಿ ಬಹಳ ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತೆ. ತನಿಖೆ ಆಗುವವರೆಗೆ ಏನನ್ನೂ ಬಹಿರಂಗ ಪಡಿಸಲು ಆಗುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಬಿಎಸ್‌ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರು ರಕ್ಷಣೆ ನೀಡುತ್ತಾರೆಯೇ ಎಂದು ಕೇಳಿದಾಗ, ಗೃಹ ಸಚಿವರು ಈಗ ಅದು ಅಗತ್ಯವಿಲ್ಲ ಎಂದು ಹೇಳಿದರು. ಅಗತ್ಯವಿದ್ದರೆ, ಪೊಲೀಸರು ಮಹಿಳೆಗೆ ರಕ್ಷಣೆ ನೀಡುತ್ತಾರೆ, ಕೇಸು ದಾಖಲು ಹಿಂದೆ ಯಾವುದೇ ರಾಜಕೀಯ ಪ್ರೇರಣೆ ಕೃತ್ಯಗಳಿಲ್ಲ ಎಂದರು. ಯಡಿಯೂರಪ್ಪರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

 

 

Donate Janashakthi Media

Leave a Reply

Your email address will not be published. Required fields are marked *