ಲೋಕಸಭಾ ಚುನಾವಣೆ : ಬಿಜೆಪಿಯಿಂದ 111 ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ: ಟಿಕೆಟ್ ಗಿಟ್ಟಿಸಿದ ಕಾಗೇರಿ, ಶೆಟ್ಟರ್, ಸುಧಾಕರ್

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ.

ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಭಾನುವಾರ ಸಂಜೆ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಹೇಳಿಕೆ ಮೂಲಕ ಮುಜುಗರಕ್ಕೆ ಕಾರಣವಾಗಿದ್ದ ಹಾಲಿ ಸಂಸದ ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ಕೈ ತಪ್ಪಿದೆ. ರಾಯಚೂರಿನಿಂದ ರಾಜಾ ಅಮರೇಶ್ ನಾಯಕ್, ಉತ್ತರ ಕನ್ನಡ ವಿಶ್ವೇಶ್ವರ ಹೆಗಡೆ ಕಾಗೇರಿ, ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್ ಹಾಗೂ ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲಾಗಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದಂತಾಗಿದ್ದು, ಬಿಜೆಪಿ ಚಿತ್ರದುರ್ಗ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ.

ಮಂಡಿ ಕ್ಷೇತ್ರದಿಂದ ಕಂಗನಾ ರಣಾವತ್‌ ಸ್ಪರ್ಧೆ : ಕಂಗನಾ ರಣಾವತ್‌ ಅವರು ಅರುಣಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಮಾಯಣ ಧಾರಾವಾಹಿಯಲ್ಲಿ ಶ್ರೀರಾಮನ ಪಾತ್ರದಾರಿ ಅರುಣ್‌ ಗೋವಿಲ್‌ ಅವರು ಉತ್ತರ ಪ್ರದೇಶದ ಮೀರತ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇನ್ನು ಭಾನುವಾರವಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ನವೀನ್‌ ಜಿಂದಾಲ್‌ ಅವರು ಹರಿಯಾಣದ ಕುರುಕ್ಷೇತ್ರದಿಂದ ಟಿಕೆಟ್‌ ಗಿಟ್ಟಿಸಿಕೊಂಡಿದ್ದಾರೆ.

ಬಿಜೆಪಿಯು ಐದನೇ ಪಟ್ಟಿಯಲ್ಲಿ ಕರ್ನಾಟಕ, ಹರಿಯಾಣ, ಗುಜರಾತ್‌, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಹೆಸರಿಸಿದೆ. ಬಿಜೆಪಿಯು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೂಡ ನಟರು, ಸೆಲೆಬ್ರಿಟಿಗಳಿಗೆ ಆದ್ಯತೆ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *