ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಭಸ್ಮ ಆರತಿ ವೇಳೆ ಸಂಭವಿಸಿದ ಬೆಂಕಿಯಲ್ಲಿ 13 ಮಂದಿ ಅರ್ಚಕರು ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅವಘಡವೊಂದು ಸಂಭವಿಸಿದೆ. ಮಹಾಕಾಳೇಶ್ವರ ದೇವಾಲಯದ ಗರ್ಭಗೃಹದಲ್ಲಿ ಕಾಣಿಸಿಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಭಸ್ಮಾರತಿ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 14 ಅರ್ಚಕರು ಗಾಯಗೊಂಡಿದ್ದಾರೆ. ಅವರೆಲ್ಲರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಲಾಲ್’ನಿಂದಾಗಿ ‘ಗರ್ಭಗೃಹ’ದಲ್ಲಿ ಬೆಂಕಿ ಸಂಭವಿಸಿದ್ದು, ಗಾಯಾಳುಗಳನ್ನು ಉಜ್ಜಯಿನಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೇವಾಲಯದ ಆರ್ಚಕ ಅಶಿಶ್ ಶರ್ಮಾ ತಿಳಿಸಿದರು.
ದೇವಾಲಯದ ಗರ್ಭಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 14 ಆರ್ಚಕರಿಗೆ ಸುಟ್ಟ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಹೋಳಿ ಹಬ್ಬದ ಸಂದರ್ಭದಲ್ಲಿ ಗುಲಾಲ್ ಎಸೆಯುವ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.