ಹೆಚ್ಚುತ್ತಿರುವ ತಾಪಮಾನ:ವಹಿಸಬೇಕಾದ ಎಚ್ಚರಿಕೆ: ಹವಾಮಾನ ಇಲಾಖೆ ನೀಡಿದ‌ ಸೂಚನೆಗಳೇನು? 

ನವ ದೆಹಲಿ: ಭಾರತ ಹವಾಮಾನ ಇಲಾಖೆ (IMD) ಈ ವರ್ಷ ಅತೀ ಹೆಚ್ಚು ತಾಪಮಾನವಿರುವುದರಿಂದ ರಾಜ್ಯದ ಜನರು ಹೆಚ್ಚುತ್ತಿರುವ ತಾಪಮಾನದಿಂದ ಯಾವ ರೀತಿ ರಕ್ಷಣೆ ಪಡೆಯಬೇಕು ಮತ್ತು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಿದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD)ಯು 2024 ರ ಏಪ್ರಿಲ್ 01 ರಂದು ಬಿಡುಗಡೆ ಮಾಡಲಾದ ಹವಾಮಾನ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ತಿಂಗಳಿನಿಂದ ಮೇ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿ ಎಚ್ಚರಿಕೆ ನೀಡಿದೆ.

ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಸಲಹೆ ನೀಡಿದೆ.

ಸೂಚನೆಗಳು: 

1. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ಅಂದರೆ, ತಪ್ಪಿಸುವುದು ಮಧ್ಯಾಹ್ನ 12:00 ರಿಂದ 3.00 ರವರೆಗೆ ಬಿಸಿಲಿಗೆ ಹೋಗುವುದನ್ನು ತಪ್ಪಿಸಬೇಕು.

2.ಕಾಲಕಾಲಕ್ಕೆ ಸಾಕಷ್ಟು ನೀರು ನುಡಿಯುವುದು.

3. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು.

4. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.

5. ಹೊರಗಿನ ಉಷ್ಣತೆಯು ಹೆಚ್ಚಿದ್ದಾಗ ಶ್ರಮದಾಯಕ ಚಟುವಟಿಕೆಗಳನ್ನು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ಆದಷ್ಟು ತಪ್ಪಿಸಿ.

6. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.

7. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.

8. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.

9. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.

10. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು.

11. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.

12. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.

13. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು. ಹಾಗೂ ಆಗಿಂದಾಗೆ ತಣ್ಣೀರು ಸ್ನಾನ ಮಾಡುವುದು.

14. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ನವರ್, ಹ್ಯಾಂಡ್ನವೆಲ್, ಹ್ಯಾಂಡ್ನಾನ್, ಎಲೆಕ್ಟೋಲೈಟ್ / ಗ್ಲೋಕೋಸ್ / ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.

ಇದನ್ನೂ ಓದಿತೆರೆದ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮ : ಮುಂದುವರಿದ ಕಾರ್ಯಾಚರಣೆ

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು

1.ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ,

2. ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ (ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಯಾವುವುದೆಂದರೆ,ಊತ ಮತ್ತು ಮೂರ್ಛೆ ಹೋದಾಗ ದೇಹ ಸಾಮಾನ್ಯವಾಗಿ 39 ° C ಅಂದರೆ 102 °F ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.

ಶಾಖದ ಬಳಲಿಕೆ: ಆಯಾಸ, ದೌರ್ಭಲ್ಯ, ತಲೆ ತಿರುಗುವಿಕೆ, ತಲೆ ನೋವು,ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.

ಶಾಖಾಘಾತ (Sun Stroke): ದೇಹದ ಉಷ್ಣತೆಯು 40° C ಅಂದರೆ 104° F ಅಥವಾ ಅದಕ್ಕಿಂತ ಹೆಬ್ಬಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು ಈ ಎಲ್ಲಾ ಲಕ್ಷಣಗಳು ಕಂಡುಬರುತ್ತವೆ.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಅನಾರೋಗ್ಯಕ್ಕೆ ಮಾಡಬೇಕಾದಂತಹ ಪ್ರಥಮ‌ ಚಿಕಿತ್ಸೆ‌ ಏನು?;

ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು.ತಂಪಾದ ಒದ್ದೆ ಬಟ್ಟೆಯನ್ನು ಆತನ ದೇಹದ‌ ಮೇಲೆ ಹಾಕಬೇಕು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ತಣ್ಣನೆಯ ನೀರನ್ನು ಹಾಕುವುದು.

ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ, ಆತನಿಗೆ ಸಾಮಾನ್ಯ ತಣ್ಣನೆಯ ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್, ನಿಂಬೆ ಪಾನಕ‌ ಕುಡಿಯಲು ನೀಡುವುದು.

ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಆತ ಧರಿಸಿರುವ ಬಟ್ಟೆಗಳನ್ನು ಸಡಿಲಗೊಳಿಸುವುದು.ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.

ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಅನಾರೋಗ್ಯವನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ನಿರ್ದಿಷ್ಟ ಕ್ರಮಗಳನ್ನು ಕೈಗೊಂಡಿದೆ

1. ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿಸಿದಂತೆ IMD ಮತ್ತು KSNDMC ಯಿಂದ ನೀಡಿದ ಮುನ್ಸೂಚನೆ ಎಚ್ಚರಿಕೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು.

2. ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ IEC ಸಕ್ರಿಯಗೊಳಿಸುವುದು.

3. ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ. ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು.

4. ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ಬಸ್ ಟರ್ಮಿನಲ್‌ಗಳು ಸೇರಿದಂತೆ ಜನಸಂದಣಿ ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸುವುದು.

5. ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡುವುದು.

6. ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ . ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ. ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು.

7.ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸುವುದು

8.,ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ORS ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ವನ್ನು ಖಚಿತಪಡಿಸಿಕೊಳ್ಳಬೇಕು. ಸ್ಥಳವನ್ನು 3 of 6 ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕ 3 of 6ಶು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಫ್ಯಾನ್ / ಏರ್ಕೂಲರ್‌ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ,ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ ನಿಗದಿಪಡಿಸುವುದು.

9.ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸುವುದು.

10.ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ORS ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ರಾನ್ / ಏರ್ಕೂಲರ್‌ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ / ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗ್ಗೆ ಅಥವಾ ಸಂಜೆ) ನಿಗದಿಪಡಿಸುವುದು.

ಜಿಲ್ಲಾಧಿಕಾರಿಗಳು / ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ತಮ್ಮ ಜಿಲ್ಲೆಗೆ ಸಂಬಂಧಿಸಿದ ಅತೀ ಹೆಚ್ಚು ತಾಪಮಾನ (heat wave) ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು.

ಕುಡಿಯುವ ನೀರಿನ ಲಭ್ಯತೆ ಕುರಿತು : 

ಪ್ರಾದೇಶಿಕ ಆಯುಕ್ತರು ಹಾಗು ಜಿಲ್ಲಾಧಿಕಾರಿಗಳು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಜಲಾಶಯಗಳಲ್ಲಿ ಇರುವ ನೀರಿನ ಸಂಗ್ರಹಣೆಯನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಧ್ಯತೆಯ ಮೇರೆಗೆ ಕಾಯ್ದಿರಿಸುವುದು.

ಹಿಂದಿನ ವರ್ಷಗಳ ಮಾಹಿತಿಯ ಆಧಾರದ ಮೇಲೆ ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಈ ಗ್ರಾಮಗಳ ವಸ್ತುಸ್ಥಿತಿಯ ಮೇಲೆ ನಿಗಾವಹಿಸುವುದು.

ಟ್ಯಾಂಕ‌ರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಖಾಸಗಿ ಬೋರ್‌ವೆಲ್ ಗುರುತಿಸಿ ಅವುಗಳ ಮೂಲಕ ಕುಡಿಯುವ ನೀರಿನ ಕೊರತೆಯನ್ನು ಅಗತ್ಯತೆಗೆ ಅನುಗುಣವಾಗಿ ನೀಗಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ. ಪರ್ಯಾಯ ಕಾರ್ಯತಂತ್ರವನ್ನು (ಕಾಂಟಿಂಜೆನ್ಸಿ ಯೋಜನೆ) ಈಗಾಗಲೆ ರೂಪಿಸಲಾಗಿದ್ದು ಆಧ್ಯತೆ ಮೇಲೆ ಹಾಗೂ ಅಗತ್ಯತೆಗೆ ತಕ್ಕಂತೆ ಇದನ್ನು ಅನುಷ್ಠಾನ ಮಾಡುವುದು.

ಕುಡಿಯುವ ನೀರಿನ ಉದ್ದೇಶಕ್ಕಾಗಿ ಗ್ರಾಮ ಅಥವಾ ಪಟ್ಟಣಕ್ಕೆ ಅಗತ್ಯವಿರುವಷ್ಟು ನೀರನ್ನು ನಿಯಮಾನುಸಾರ ಪೈಪ್ ಲೈನ್ ಮೂಲಕ ಪೂರೈಸುವುದು.

ಅಸ್ತಿತ್ವದಲ್ಲಿರುವ ನೀರು ಸರಬರಾಜು ಯೋಜನೆಗಳ ವಿದ್ಯುತ್. ಪಂಪ್‌ಗಳು, ಕೈ ಪಂಪುಗಳ ದುರಸ್ತಿ, ಕಡಿಮೆ ನೀರಿನ ಲಭ್ಯತೆ ಇರುವ ಬೋರ್‌ವೆಲ್‌ಗಳನ್ನು ಪ್ಲಶಿಂಗ್ ಮಾಡುವುದು ಮತ್ತು ಆಳಗೊಳಿಸುವುದು ಮತ್ತು ಆರ್‌ಒ ಪ್ಲಾಂಟ್‌ಗಳ ನಿರ್ವಹಣೆ ಇತ್ಯಾದಿಗಳನ್ನು ಆದ್ಯತೆಯ ಮೇಲೆ ಈಗಾಗಲೆ ತೆಗೆದುಕೊಳ್ಳಲಾಗಿದ್ದು ಇದರ ಮೇಲೆ ನಿಗಾವಹಿಸುವುದು.

ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಗಳ ಸಭೆಗಳನ್ನು ಪ್ರತಿವಾರ ನಡೆಸುತ್ತಿದ್ದು ಇದನ್ನು ಮುಂದುವರೆಸುವ‌ ನಿರ್ಧಾರವನ್ನು ಇಲಾಖೆ ಕೈಗೊಂಡು ಆದೇಶಿಸಿದೆ.

 

Donate Janashakthi Media

Leave a Reply

Your email address will not be published. Required fields are marked *