ಬೆಂಗಳೂರು: ‘ನನ್ನ ವಿರುದ್ಧ ಶೋಭಾ ಕರಂದ್ಲಾಜೆ ಅವರು ಯಾವಾಗ ದ್ವೇಷ ಭಾಷಣ ಮಾಡುತ್ತಾರೋ ಎಂಬ ಭಯ ಕಾಡುತ್ತಿದೆ’ ಎಂದು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಶೋಭಾ ಕರಂದ್ಲಾಜೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ಈ ಹಿಂದೆ ಇಲ್ಲಿನ ಸಂಸದರಾಗಿದ್ದ ಡಿ.ಬಿ.ಚಂದ್ರೇಗೌಡ ಮತ್ತು ಡಿ.ವಿ.ಸದಾನಂದಗೌಡ ಅವರ ಜತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಆದರೆ, ಶೋಭಾ ಕರಂದ್ಲಾಜೆ ಯಾವಾಗ ನನ್ನ ವಿರುದ್ಧ ದ್ವೇಷ ಭಾಷಣ ಮಾಡುತ್ತಾರೆ ಎಂಬುದು ಗೊತ್ತಿಲ್ಲ. ಹೀಗಾಗಿ ಕ್ಷೇತ್ರಕ್ಕೆ ಹೋಗಲು ಭಯ ಆಗುತ್ತಿದೆ’ ಎಂದರು.
‘ಒಂದು ವೇಳೆ ದ್ವೇಷ ಭಾಷಣ ಮುಂದುವರಿದರೆ ಪೊಲೀಸ್ ಕಮಿಷನರ್ ಅವರನ್ನು ಭೇಟಿ ಮಾಡಿ ರಕ್ಷಣೆ ಕೇಳಬೇಕಾಗುತ್ತದೆ. ಅವರು ಇಲ್ಲಿಗೆ ಸಂಸದೆಯಾಗಲು ಬಂದಿದ್ದಾರೋ ಅಥವಾ ಜನರನ್ನು ಪ್ರಚೋದಿಸಲು ಬಂದಿದ್ದಾರೋ’ ಎಂದು ಅವರು ಪ್ರಶ್ನಿಸಿದರು.
ಇದನ್ನು ಓದಿ : “ಆಪರೇಷನ್ ಕಮಲ” ಹೇಳಿಕೆ ಅತಿಶಿಗೆ ಚುನಾವಣಾ ಆಯೋಗ ನೋಟಿಸ್
ನೋಟಿಸ್‌ಗೆ 170 ಪುಟಗಳ ಉತ್ತರ:
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್‌ಗೆ ಮತ ಚಲಾಯಿಸಿದ ಎಸ್.ಟಿ.ಸೋಮಶೇಖರ್ ಮತ್ತು ಮತ ಚಲಾಯಿಸದ ಶಿವರಾಮ್ ಹೆಬ್ಬಾರ್ ಅವರು ಬಿಜೆಪಿ ವರಿಷ್ಠರು ನೀಡಿದ ನೋಟಿಸ್‌ಗೆ ತಲಾ 170 ಪುಟಗಳ ಉತ್ತರ ನೀಡಿರುವುದಾಗಿ ಹೇಳಿದರು.
ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿ ಘೋಷಣೆಯಾದ ಬಳಿಕ ಯಶವಂತಪುರ ಶಾಸಕ ಸೋಮಶೇಖರ್ ಅವರನ್ನು ಭೇಟಿ ಮಾಡಿಲ್ಲ. ಆದರೆ, ಅವರ ಕಟ್ಟಾ ಎದುರಾಳಿ ಜೆಡಿಎಸ್‌ನ ಜವರಾಯಿಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ : ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ ಎಂದು ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ಬಿಜೆಪಿಯಲ್ಲಿ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸೋಮಶೇಖರ್ ಕಾಲು ಹೊರಗಡೆ ಹಾಕಿದ್ದಾರೆ. ಅವರು ಕಾಂಗ್ರೆಸ್ನವರ ಸಂಪರ್ಕದಲ್ಲಿ ಇದ್ದಾರೆ. ಅವರ ವಿರುದ್ಧ ಬಿಜೆಪಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಮಶೇಖರ್ ಮತ ಹಾಕಿದ್ದಾರೆ. ಅವರು ಆಗಲೇ ಬಿಜೆಪಿಯಿಂದ ಕಾಲು ಹೊರಗಿಟ್ಟಿದ್ದರು ಎಂದು ಅಶೋಕ್ ಹೇಳಿದ್ದಾರೆ.
ಇದನ್ನು ನೋಡಿ : ಕನ್ನಗಳ್ಳಂಗೆ (ಮೋದಿ) ಕರುಳುಂಟೆ ? ಡಾ ಮೀನಾಕ್ಷಿ ಬಾಳಿ ಹೀಗಂದಿದ್ದು ಯಾಕೆ..?Janashakthi Media