ಕೋಲಾರ: ಲೋಕಸಭಾ ಚುನಾವಣೆಯ ಮೊದಲನೇ ಹಂತಕ್ಕೆ ಈಗಾಗಲೇ ರಂಗೇರಿದ್ದು, ಕಾಂಗ್ರೆಸ್ ಪಕ್ಷ ಇಂದಿನಿಂದ ತನ್ನ ಪ್ರಚಾರ ಕಾರ್ಯಕ್ಕೆ ವಿಧ್ಯುಕ್ತ ಆರಂಭ ನೀಡುತ್ತಿದೆ. ಪ್ರಜಾಧ್ವನಿ-2
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೋಲಾರದ ಮುಳಬಾಗಿಲಿನಲ್ಲಿರುವ ಪುರಾಣ ಪ್ರಸಿದ್ಧ ಕುರುಡುಮಲೆ ವಿನಾಯಕ ದೇಗುಲದಲ್ಲಿ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲಿದ್ದಾರೆ. ಪ್ರಜಾಧ್ವನಿ-2
ಶನಿವಾರ ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದ ಬಳಿಕ ಮುಳಬಾಗಿಲು ನಗರದ ಬಾಬಾ ಹೈದರ್‌ವಲ್ಲಿ ದರ್ಗಾಕ್ಕೆ ಸಿಎಂ, ಡಿಸಿಎಂ ಸಹಿತ ಕಾಂಗ್ರೆಸ್ ಮುಖಂಡರು ಭೇಟಿ ನೀಡಲಿದ್ದು, ನಂತರ ಡಾ.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
ಇದನ್ನು ಓದಿ : ಐದು ವರ್ಷಗಳಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಆಸ್ತಿಯಲ್ಲಿ ಸುಮಾರು 30% ಹೆಚ್ಚಳ
ಪ್ರಜಾಧ್ವನಿ ಯಾತ್ರೆ ಅಂಬೇಡ್ಕರ್ ವೃತ್ತದಿಂದ ಹೊರಟು ಸೌಂದರ್ಯ ವೃತ್ತದವರೆಗೆ ಮೆರವಣಿಗೆ ಯಲ್ಲಿ ಸಾಗಿ ಅಲ್ಲಿ ಬಹಿರಂಗ ಪ್ರಚಾರ ನಡೆಯಲಿದೆ. ಕಾರ್ಯಕ್ರಮಕ್ಕೆ 10-15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ ತಿಳಿಸಿದ್ದಾರೆ.
ಈ ಮೊದಲು ಮಾ.29ರಂದು ಕುರುಡುಮಲೆ ಹಾಗೂ ಮಾ.30ರಂದು ಹಾಸನದ ಹೊಳೆನರಸೀಪುರದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲು ಕಾಂಗ್ರೆಸ್ ಉದ್ದೇಶಿಸಿತ್ತು. ಈ ಸಂಬಂಧ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಭಿನ್ನಮತ ಸ್ಫೋಟಗೊಂಡು, ಅದು ರಾಜೀನಾಮೆ ಪ್ರಹಸನಕ್ಕೂ ತಲುಪಿತ್ತು. ಈ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.
ಇದನ್ನು ನೋಡಿ : ಕಾರ್ಮಿಕ ಪ್ರಣಾಳಿಕೆ ಬಿಡುಗಡೆ |ಕಾರ್ಮಿಕ ವಿರೋಧಿ ಬಿಜೆಪಿಯನ್ನು ಸೋಲಿಸಿ Janashakthi Media