ಗೌಪ್ಯ ಕಡತಗಳು ನಾಪತ್ತೆ: ಠಾಣೆ ಮೆಟ್ಟಿಲೇರಿದ ಪಂಚಾಯತ್‌ರಾಜ್ ಇಲಾಖೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ನೇಮಕಾತಿ ಆಯ್ಕೆ ಪಟ್ಟಿಯ ಕಡತ ನಾಪತ್ತೆಯಾಗಿದ್ದ ಪ್ರಕರಣದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೇರಿದ ಎರಡು ಕಡತಗಳೂ ಕೂಡ ನಾಪತ್ತೆಯಾಗಿದೆ ಎಂದು ನ್ಯೂ ಇಂಡಿಯನ್‌ ಎಕ್ಸ್‌ಪ್ರಸ್‌ ವರದಿಮಾಡಿದೆ.

ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯೊಬ್ಬರು ಮಾಧ್ಯಮಗಳ ಜೊತೆ ಮಾತನಾಡಿ, ಗ್ರಾಮ ಪಂಚಾಯತ್ಗಳಲ್ಲಿನ ಸರ್ಕಾರಿ ನೌಕರರ ಕಾನೂನುಬದ್ಧ ವಾರಸುದಾರರಿಗೆ ವೈದ್ಯಕೀಯ ಕಾರಣಗಳಿಗಾಗಿ ಅನುಕಂಪದ ಆಧಾರದ ಮೇಲೆ ಉದ್ಯೋಗಗಳನ್ನು ಒದಗಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ 2 ಕಡತಗಳು ನಾಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿಮಂಡ್ಯ : “ಗೋ ಬ್ಯಾಕ್ ಕುಮಾರಸ್ವಾಮಿಮಹಿಳೆಯರ ಪ್ರತಿಭಟನೆ

ಎರಡು ಕಡತಗಳು ಮೇ 31, 2018 ರಂದು ಪರ್ಸನಲ್ ಸೆಕ್ಷನ್ ನಿರ್ದೇಶಕರ (ಪಂಚಾಯತ್ ರಾಜ್-1) ಕಚೇರಿಗೆ ರವಾನೆಯಾಗಿತ್ತು ಹೀಗಾಗಿ, 2018ರಲ್ಲಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಪತ್ತೆಯಾಗಿರುವ ಕಡತಗಳಿಗಾಗಿ ಹುಡುಕಾಟ ನಡೆಸಲಾಗದೆ. ಆದರೂ ಇದೂವರೆಗೂ ಪತ್ತೆಯಾಗಿಲ್ಲ. ವೈದ್ಯಕೀಯ ಕಾರಣಗಳಿಗಾಗಿ ಅನುಕಂಪದ ಆಧಾರದ ಮೇಲೆ ಉದ್ಯೋಗ ಕೋರುವ ಸರ್ಕಾರಿ ನೌಕರರ ಕಾನೂನು ವಾರಸುದಾರರ ಕೋರಿಕೆಯ ಮೇರೆಗೆ ಕಡತವನ್ನು ಸಿದ್ಧಪಡಿಸಲಾಗಿತ್ತು. ಇದೀಗ ತಪ್ಪಿತಸ್ಛ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ವಿಧಾನಸೌಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೈಕೋರ್ಟ್ ನಿರ್ದೇಶನದ ಮೇರೆಗೆ ಕಡತವನ್ನು ಸಿದ್ಧಪಡಿಸಲಾಗಿತ್ತು ಎನ್ವಲಾಗಿತ್ತು. ಕಡತ ನಾಪತ್ತೆ ಸಂಬಂಧ KPSC ಸಹಾಯಕ ಕಾರ್ಯದರ್ಶಿ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆಂದು ತಿಳಿದು ಬಂದಿದೆ.

 

Donate Janashakthi Media

Leave a Reply

Your email address will not be published. Required fields are marked *