ನುಡಿದಂತೆ ನಡೆದು, ಸತ್ಯ ಹೇಳುವವರನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಬೇಕು, ಸತ್ಯಕ್ಕೆ ಜಯ ಸಿಗಬೇಕು; ಸಿದ್ದರಾಮಯ್ಯ

ತುಮಕೂರು: ನುಡಿದಂತೆ ನಡೆದು, ಸತ್ಯ ಹೇಳುವವರನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಬೇಕು, ಸತ್ಯಕ್ಕೆ ಜಯ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ನಗರದ ಹೊರ ವಲಯದ ಯಲ್ಲಾಪುರದಲ್ಲಿ ಮಂಗಳವಾರ ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸಿದ್ದರಾಮಯ್ಯ

‘ನಾವು ಸತ್ಯ ಹೇಳುತ್ತಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು. ಲೋಕಸಭೆ ಚುನಾವಣೆ ನಂತರ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಧೈರ್ಯದಿಂದ ಸತ್ಯ ಹೇಳುವವರನ್ನು ಬೆಂಬಲಿಸಬೇಕು. ಸುಳ್ಳು ಹೇಳುವ ಬಿಜೆಪಿಯವರನ್ನು ತಿರಸ್ಕರಿಸಬೇಕು’ ಎಂದು ಕೇಳಿಕೊಂಡರು. ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಎದುರು ರಾಜ್ಯದ ಸಂಸದರು ಬಾಯಿ ಬಿಡಲಿಲ್ಲ. ಮೋದಿ ಕಂಡರೆ ನಡುಗುತ್ತಾರೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಸತ್‌ನಲ್ಲಿ ಪ್ರಶ್ನಿಸಲಿಲ್ಲ. ಇಂತಹವರನ್ನು ಮತ್ತೆ ಸಂಸತ್‌ಗೆ ಕಳುಹಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಪರವಾಗಿ ಮಾತನಾಡುವ, ನ್ಯಾಯ ಕೇಳುವ ಸಾಮರ್ಥ್ಯ ಇರುವ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಆಯ್ಕೆ ಮಾಡಿದರೆ, ಸಂಸತ್‌ನಲ್ಲಿ ಜನರ ಧ್ವನಿಯಾಗಿ ನಿಲ್ಲುತ್ತಾರೆ ಎಂದು ಹೇಳಿದರು.

ಇದನ್ನು ಓದಿ : ಪ್ರಧಾನಿ ಹುದ್ದೆಗೆ ಮೋದಿ ಕಳಂಕ – ಜಾಗೃತ ನಾಗರಿಕ ಕರ್ನಾಟಕ ಆರೋಪ

‘ಅಭಿವೃದ್ಧಿಯ ಹರಿಕಾರ, ಕೆಲಸಗಾರ, ಗೆಲ್ಲಿಸಿ’ ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಕೇಳುತ್ತಿದ್ದಾರೆ. ವಸತಿ ಸಚಿವರಾಗಿದ್ದಾಗ ಹೊಸದಾಗಿ ಒಂದು ಮನೆಯನ್ನೂ ಕಟ್ಟಿಸಲಿಲ್ಲ. ಇದ್ದರೆ ದಾಖಲೆ ತೋರಿಸಲಿ. ಸುಮ್ಮನೆ ಬೊಗಳೆ ಬಿಡುತ್ತಿದ್ದಾರೆ. ಹಿಂದೆ ಇದ್ದ ಸಂಸದರು ಬಾಯಿ ಬಿಡಲಿಲ್ಲ. ಸೋಮಣ್ಣ ಅವರನ್ನು ಕಳುಹಿಸಿದರೆ ಅವರೂ ಬಾಯಿ ಬಿಚ್ಚುವುದಿಲ್ಲ. ಅಂತಹವರನ್ನು ತಿರಸ್ಕರಿಸಿ, ಯೋಗ್ಯ, ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಬೇಕು’ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಬಿಚ್ಚಿಟ್ಟರು. ಕೊಟ್ಟ ಭರವಸೆ ಈಡೇರಿಸದೆ ಸುಳ್ಳು ಹೇಳುತ್ತಿದ್ದಾರೆ ಎಂದು ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ಟೂರಿಂಗ್ ಟಾಕೀಸ್ ಅಭ್ಯರ್ಥಿಯಾಗಿರುವ ಸೋಮಣ್ಣ ಅವರನ್ನು ದೂರ ಇಡಬೇಕು. ವರುಣಾ, ಚಾಮರಾಜನಗರದಲ್ಲಿ ಸೋತು ಬಂದು ಇಲ್ಲಿನ ಜನರಿಗೆ ಆಸೆ, ಆಮಿಷ ಒಡ್ಡುತ್ತಿದ್ದಾರೆ. ಇನ್ನಿಲ್ಲದಂತೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹವರಿಗೆ ಸರಿಯಾಗಿ ಬುದ್ಧಿ ಕಲಿಸಬೇಕು’ ಎಂದು ಹೇಳಿದರು. ಸಿದ್ದರಾಮಯ್ಯ

ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಕೆ.ಷಡಕ್ಷರಿ, ಎಚ್.ವಿ.ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಕೆ.ಆರ್.ರಾಜೇಂದ್ರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ಗೌಡ, ಮಾಜಿ ಶಾಸಕರಾದ ಕೆ.ಎಸ್.ಕಿರಣ್ ಕುಮಾರ್, ರಫಿಕ್ ಅಹಮದ್, ಡಿ.ಸಿ.ಗೌರಿಶಂಕರ್, ಗಂಗಹನುಮಯ್ಯ, ಬೆಮಲ್ ಕಾಂತರಾಜು, ಮುಖಂಡರಾದ ಎಂ.ಸಿ.ವೇಣುಗೋಪಾಲ್, ಎನ್.ಗೋವಿಂದರಾಜು, ಆರ್.ರಾಮಕೃಷ್ಣ, ಇಕ್ಬಾಲ್ ಅಹಮದ್, ಗೀತಾ ರಾಜಣ್ಣ, ಮುರಳೀಧರ್ ಹಾಲಪ್ಪ, ನಿಕೇತ್‌ರಾಜ್ ಮೌರ್ಯ ಮೊದಲಾದವರು ಉಪಸ್ಥಿತರಿದ್ದರು.

ಇದನ್ನು ನೋಡಿ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ : ಜಿದ್ದಾ ಜಿದ್ದಿಕಣ, ಕ್ಷೀಣಗೊಂಡ ಜೆಡಿಎಸ್‌ ಪ್ರಾಬಲ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *