ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಶಿಗ್ಗಾಂವ್: ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಹಸೂಟಿ ಪರವಾಗಿ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ನರೇಂದ್ರ ಮೋದಿ ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ ಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವ ವಿನಯ್ ಕುಲಕರ್ಣಿ ಜತೆಗೆ ಶಾಸಕರಾದ ಕೋನರೆಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ನಾಯಕರಾದ ಯಾಸಿರ್ ಖಾನ್ ಪಠಾಣ್,  ಸೋಮಣ್ಣ ಬೇವಿನಮರದ , ಅಜೀಂ ಪೀರ್ ಖಾದ್ರಿ ಸೇರಿ ಜಿಲ್ಲಾ ಮತ್ತು ತಾಲೂಕಿನ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನೂ ನೋಡಿ: ವಿಕಾಸ ರಾಜನ ಕಥೆ – ಗಾಯನ ಮತ್ತು ಸಂಗೀತ – ಪಿಚ್ಚಳ್ಳಿ ಶ್ರೀನಿವಾಸ Janashakthi Media

Donate Janashakthi Media

Leave a Reply

Your email address will not be published. Required fields are marked *