ಚಾಮರಾಜನಗರ: ಮತದಾನ ಬಹಿಷ್ಕಾರಿಸಿದ್ದ ಗ್ರಾಮಸ್ಥರನ್ನು ಮನವೊಲಿಸಲು ತೆರಳಿದ್ದ ಅಧಿಕಾರಿಗಳ ವಿರುದ್ಧ ಕಲ್ಲು ತೂರಾಟ ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಕಲ್ಕು
ಎರಡು ಗುಂಪುಗಳ ಮಧ್ಯೆ ನಡೆದ ಜಗಳ ಕೊನೆಗೆ ವಿಕೋಪಕ್ಕೆ ತಿರುಗಿ ಇವಿಎಂ ಹಾಗೂ ಮತಗಟ್ಟೆಯ ಪೀಠೋಪಕರಣಗಳನ್ನು ದ್ವಂಸ ಮಾಡಿದ್ದಾರೆ. ಗಲಾಟೆಯಲ್ಲಿ ಕೆಲವು ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಕಲ್ಕು
ಇದನ್ನು ಓದಿ : ಮತದಾನದ ಹಕ್ಕು ಪೋರೈಸಿ ಪ್ರಾಣ ಬಿಟ್ಟ ವೃದ್ಧರು
ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಈ ವೇಳೆ ಅಧಿಕಾರಿಗಳು ಕೆಲವರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದಾರೆ. ಈ ವೇಳೆ ಇಡೀ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದೇವೆ ಎಂದು ಗ್ರಾಮದ ಒಂದು ಗುಂಪು ಗಲಾಟೆ ಆರಂಭಿಸಿದೆ.
ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಗ್ರಾಮಸ್ಥರು ಆರೋಪಿಸಿದ್ದರು.
ಚಿತ್ರದುರ್ಗದಲ್ಲಿ ಬಹಿಷ್ಕಾರ
ಹೊಳಲ್ಕೆರೆ ಕ್ಷೇತ್ರದ ಸಿರಿಗೆರೆ ಸಿದ್ದಾಪುರ ಗ್ರಾಮವು ಗಣಿಬಾಧಿತ ಪ್ರದೇಶದ ವ್ಯಾಪ್ತಿಗೆ ಬಂದರೂ, ಅಭಿವೃದ್ದಿಯನ್ನು ಖಂಡಿಲ್ಲ, ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದರು. ಬೆಳಗ್ಗೆಯಿಂದ ಒಂದು ಮತವನ್ನು ಗ್ರಾಮಸ್ಥರು ಚಲಾಯಿಸಿರಲಿಲ್ಲ. ಇದೀಗ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿ ಮತ ಚಲಾಯಿಸುವಂತೆ ಮನವಿಮಾಡಿದ್ದಾರೆ. ಇದರ ಪರಿಣಾಮ ಇದೀಗ 10 ತಾಸುಗಳ ನಂತರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಐದು ಮತಗಳನ್ನು ಚಲಾಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ
ಇದನ್ನು ನೋಡಿ : ಪ್ರಧಾನಿ ಮೋದಿ ಭ್ರಷ್ಟಾಚಾರದ ಚಕ್ರವರ್ತಿ – ಕೆ. ವಿ.ನಾಗರಾಜ ಮೂರ್ತಿ Janashakthi Media