ತಿರುವನಂತಪುರಂ: ಕೇರಳ ರಾಜ್ಯದ ಇಲ್ಲಿನ ಮಲಪ್ಪುರಂ, ಕೋಯಿಕ್ಕೋಡ್ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ವೆಸ್ಟ್ ನೈಲ್ ಜ್ವರ ದೃಢಪಟ್ಟಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಗಡಿ ಭಾಗಗಳಲ್ಲಿನ ಜನರು ಆತಂಕಕ್ಕೀಡಾಗಿದ್ದಾರೆ. ಗಡಿ
ಉತ್ತರ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಪಶ್ಚಿಮ ನೈಲ್ ಜ್ವರದ ಐದು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಪ್ರಸ್ತುತ ಈ ವೆಸ್ಟ್ ನೈಲ್ ಜ್ವರ, ಮನುಷ್ಯರಿಂದ ಮನುಷ್ಯರಿಗೆ ಹರುಡುತ್ತೆದೆ ಎಂದು ಹೇಳಲಾಗಿದ್ದು, ಹಲವು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಉಪಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಲ್ಲು ತೂರಾಟ
ರೋಗದ ಲಕ್ಷಣಗಳನ್ನು ಪ್ರದರ್ಶಿಸಿದ ಮತ್ತು ಚಿಕಿತ್ಸೆಗೆ ಒಳಗಾದವರ ಮಾದರಿಗಳನ್ನು ಸಾಮಾನ್ಯದಂತೆಯೇ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶಗಳು ಈಗ ಬಂದಿದ್ದು, ಅವರು ವೆಸ್ಟ್ ನೈಲ್ ಜ್ವರದಿಂದ ಬಳಲುತ್ತಿದ್ದಾರೆ. ಅವರಿಕೆ ಸೂಕ್ತಕಾಲದಲ್ಲಿ ಚಿಕಿತ್ಸೆ ನೀಡಲಾಗಿದ್ದರಿಂದ ಅವರೆಲ್ಲರೂ ಈಗ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ನೋಡಿ: ಪೆನ್ ಡ್ರೈವ್ ಹಂಚಿಕೆ ಪ್ರಕರಣ- ರಾಜಕೀಯ ಮೇಲಾಟ- ಹೆಣ್ಣಿನ ಘನತೆಯ ಜೊತೆ ಆಟ