ಬೆಂಗಳೂರು: ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರದ ಶಾಸಕ ಹೆಚ್. ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.
ಮಧ್ಯಾಹ್ನ 2:45 ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದ್ದು ರೇವಣ್ಣ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಇದನ್ನೂ ಓದಿ: ದೇವರಾಜೇಗೌಡ ನಕಲಿ ವಕೀಲ, ಶಿವರಾಮೇಗೌಡ ಆರೋಪ
ಎಸ್ಐಟಿ ಅಧಿಕಾರಿಗಳು ಬೇಲ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೋಮವಾರದವರೆಗೂ ಸಮಯಾವಕಾಶ ಕೇಳಿದರು. ಆದರೆ ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಮುಂದೂಡಿ ಇಂದೇ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಮೈಸೂರಿನ ಕೆ.ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚೆಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ ಎಚ್ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ನೋಡಿ: ಸಂಯುಕ್ತ ಕಿಸಾನ್ ಮೋರ್ಚಾ ಅಖಿಲ ಭಾರತ ಪತ್ರಿಕಾಗೋಷ್ಠಿ-ಹುಬ್ಬಳ್ಳಿ SKM All India Press Meet Karnataka.