ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ ಸೇರಲಿರುವ ಬಿಜೆಪಿ-ಜೆಡಿಎಸ್‌ನ 20 ಶಾಸಕರು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್‌ ಪಕ್ಷವನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ, ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ. ಏಕನಾಥ ಶಿಂದೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ.

ಇದನ್ನು ಓದಿ : ಬಿಸಿಲ ಧಗೆ ಮತ್ತು ಹಾವುಗಳ ಬದುಕು

ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರ್ಕಾರ ಬರಲಿದೆ ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಸೂಚ್ಯವಾಗಿ ಎಂ.ಬಿ.ಪಾಟೀಲ ಹೇಳಿದರು.

ಇದನ್ನು ನೋಡಿ : ಲೋಕಸಭಾ ಚುನಾವಣೆ : ಹಣ ಹಂಚುವವರನ್ನು ಸೋಲಿಸಿ, ಪ್ರಜಾಪ್ರಭುತ್ವವನ್ನು ರಕ್ಷಿಸಿ

Donate Janashakthi Media

Leave a Reply

Your email address will not be published. Required fields are marked *