ಬೆಂಗಳೂರು: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಕೇಳಿಬಂದಿರುವ ನಿರ್ಲಕ್ಷ್ಯದ ವಿಚಾರವಾಗಿ ಪೊಲೀಸ್ ಸಬ್ಇನ್ಸ್ಫೆಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹುಬ್ಬಳ್ಳಿ
ಈ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದರು.
ಪೊಲೀಸ್ ಅವರ ಸಸ್ಪೆಂಡ್ ಮಾಡಿದ್ದಾರೆ. ತಕ್ಷಣಕ್ಕೆ ಪೊಲೀಸರು ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಅವರು ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.. ಇನ್ಸ್ಫೆಕ್ಟರ್ಗಳನು ಸಸ್ಪೆಂಡ್ ಮಾಡಲಾಗಿದೆ. ಈ ವಿಷಯ ನಿಜಕ್ಕೂ ಮೊದಲೇ ಗೊತ್ತಿತ್ತಾ ಅಥವಾ ಇಲ್ಲವಾ? ಎನ್ನುವುದರ ಬಗ್ಗೆಯೂ ಸಮಗ್ರ ಮಾಹಿತಿ ಪಡೆಯಲಾಗುತ್ತಿದೆ.
ಇದನ್ನೂ ಓದಿ: ಅಂಜಲಿಯನ್ನು ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಡಿವೈಎಫ್ಐ ಆಗ್ರಹ
ಸದ್ಯಕಕೆ ಕರ್ತವ್ಯ ಲೋಪದಡಿ ಪೊಲೀಸ್ ಇನ್ಪೆಕ್ಟರ್ ಮತ್ತು ಮಹಿಳಾ ಹೆಡ್ಕಾನ್ಸ್ಟೇಬಲ್ ಅವರನ್ನು ಸಹ ಅಮಾನತುಗೊಳಿಸಲಾಗಿದೆ ಎಂದರು. ನನ್ನ ಮೊಮ್ಮಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅವರ ಅಜ್ಜಿ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ, ಯಾವುದೇ ದೂರು ನೀಡಿರಲಿಲ್ಲ. ಸದ್ಯ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಯಾವುದ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇನ್ನು ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆತರುವ ಕುರಿತು ಮಾಹಿತಿ ನೀಡಿದ ಪರಮೇಶ್ವರ್, ಪ್ರಜ್ವಲ್ನನ್ನು ಕರೆತರುವ ಕೆಲಸ ನಡೆಯುತ್ತಿದೆ. ಪ್ರಜ್ವಲ್ ಕರೆತಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಬಳ್ಳೆಯ ಕೆಲಸ ಮಾಡುತ್ತಿದೆ ಎಂದರು. ಎಸ್ಐಟಿ ವರದಿ ಮಂಡ್ಯ ಶಾಸಕರಿಗೆ ಮೊದಲೇ ಗೊತ್ತಿರುತ್ತದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಪ್ರಕರಣವು ತನಿಖೆ ಹಂತದಲ್ಲಿದೆ. ಅನೇಕ ವಿಚಾರವನ್ನು ಸಾರ್ವಜನಿಕಗೊಳಿಸುವಂತಿಲ್ಲ. ಎಸ್ಐಟಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಇನ್ನು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಇದನ್ನೂ ನೋಡಿ: ಖಾಸಗಿ ಆಸ್ಪತ್ರೆಗಳ ಬಣ್ಣದ ಮಾತುಗಳಿಗೆ ಮರುಳಾದರೆ ಜೇಬಿಗೆ ಕತ್ರಿ ಬಿದ್ದಂತೆ – ಮರುಳಸಿದ್ದಪ್ಪ ಮಾತುಗಳು