ಬೆಂಗಳೂರು: “ಕುಮಾರಸ್ವಾಮಿ ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದರು.
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಡಿ.ಕೆ. ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿ ಮಾತನಾಡಿದರು.
ಇದನ್ನು ಓದಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹತ್ಯಾಕಾಂಡ ಪ್ರಕರಣ : ಹೈಕೋರ್ಟ್ ಎಸ್ಪಿಪಿಯಾಗಿ ಪ್ರೊ. ರವಿವರ್ಮ ಕುಮಾರ್ ನೇಮಕ
“ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದು ಪ್ರಶ್ನಿಸಿದರು.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದಾಗ “ಮೊದಲು ಶಿಕ್ಷಕ, ಪದವೀದರ ಕ್ಷೇತ್ರದ ಚುನಾವಣೆ ಮುಗಿಯಲಿ ನಂತರ ಇದರ ಬಗ್ಗೆ ಕೆಲಸ ಪ್ರಾರಂಭ ಮಾಡುತ್ತೇವೆ” ಎಂದರು.
ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಯುವಕ- ಯುವತಿಯರಿಗೆ ಶಿವಕುಮಾರ್ ಅವರು ಅಭಿನಂದಿಸಿದರು.
ಇದನ್ನು ನೋಡಿ : ಮಣ್ಣಿನ ಮಕ್ಕಳು’ ಎಂದು ಹೇಳಿಕೊಂಡು ದೌರ್ಜನ್ಯ ನಡೆಸಿದ್ದೆ ಜಾಸ್ತಿ | ರೇವಣ್ಣ ರಿಪಬ್ಲಿಕ್Janashakthi Media