ಬೆಳಗಾವಿ: ಗ್ರಾಮದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿ, 51 ಜನ ಅಸ್ವಸ್ಥರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಈ ಘಟಣೆ ನಡೆದಿದೆ. ಅಸ್ವಸ್ಥಗೊಂಡವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಹಾಗೂ ಸವದತ್ತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸಾದವನ್ನು ಸೇವಿಸಿದ್ದಂತೆಯೇ ಏಕಾಏಕಿ ವಾಂತಿ-ಭೇದಿ ಆಗಿದೆ.
ಅಸ್ವಸ್ಥಗೊಂಡಿರುವ ಗ್ರಾಮಸ್ಥರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸದ್ಯ ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ತಾಲೂಕಾ ವೈದ್ಯರು ಗ್ರಾಮದಲ್ಲಿ ಕ್ಯಾಂಪನ್ನು ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ನೋಡಿ: ಓದಲು ಹಾಗೂ ಬರೆಯಲು ಬಾರದ ಹುಡುಗನಿಗೆ ಎಸ್ಎಸ್ಎಲ್ಸಿಯಲ್ಲಿ 623 ಅಂಕ, ಅಂಕಗಳ ಆಧಾರಏಕಾಏಕಿ ವಾಂತಿ-ಭೇದಿದಲ್ಲಿ ಜವಾನ ಹುದ್ದೆ
ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಮಾಡಿ ಗ್ರಾಮದ ಭೀರೇಶ್ವರ ಮತ್ತು ಕರೆಮ್ಮ ಜಾತ್ರೆಯಲ್ಲಿ ಪ್ರಸಾದವಾಗಿ ಸೇವಿಸಿದ್ದರು. ಏಕಾಏಕಿ ವಾಂತಿ-ಭೇದಿ ಪ್ರಸಾದ ಸೇವಿಸಿದ ಜನರಲ್ಲಿ ಕಾಣಿಸಿಕೊಂಡಿತ್ತು. ಅಸ್ತವ್ಯಸ್ಥಗೊಂಡವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಕೂಡಲೆ ಚಿಕಿತ್ಸೆ ಕೊಡಲಾಗಿದೆ. ಈ ಘಟನೆಯ ಕುರಿತು ಮಾಹಿತಿ ಸಿಗುತ್ತಿದ್ದಂತೆಯೇ, ಸವದತ್ತಿ ಮತಕ್ಷೇತ್ರದ ಶಾಸಕ ವಿಶ್ವಾಸ್ ವೈದ್ಯ ದೌಡಾಯಿಸಿ, ಆಸ್ಪತ್ರೆಯೆಲ್ಲಿದ್ದ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಶಾಸಕ ನೀಡಿದ್ದಾರೆ.
ಪ್ರಸಾದ ಸೇವಿಸಿದವರಲ್ಲಿ ವಾಂತಿ-ಭೇದಿ ಕಂಡುಬಂದ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಲಾಗಿದೆ. ಪ್ರತಿಗಂಟೆಗೂ ರೋಗಿಗಳ ಮಾನಿಟರ್ ಮಾಡಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದ ಡಿಎಚ್ಓ ಡಾ.ಮಹೇಶ ಕೋಣಿ ತಿಳಿಸಿದ್ದಾರೆ.
ಇದನ್ನೂ ನೋಡಿ: ಗ್ರೇಸ್ ಮಾರ್ಕ್ಸ್ : ಶಾಲಾ ಶಿಕ್ಷಣದ ಹೀನಾಯ ಸ್ಥಿತಿ ಅನಾವರಣJanashakthi Media