ಬೆಂಗಳೂರು:ಇಂದು ರಾಜಧಾನಿಯ ಮುಖ್ಯಭಾಗಗಳಲ್ಲಿರುವ ಮೂರು ಹೋಟೆಲ್ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿವೆ. ಈ ಮೂಲಕ ಬೆಳ್ಳಂಬೆಳಗ್ಗೆ ಮಾಲೀಕರಿಗೆ, ಸಿಬ್ಬಂದಿ ಶಾಕ್ ನೀಡಲಾಗಿದೆ. ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್ಗಳಿಗೆ ಇಂದು ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಬೆಳಗ್ಗೆ ಸುಮಾರು 2 ಗಂಟೆಗೆ ಇ ಮೇಲ್ ಗಳು ಬಂದಿವೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಸಿಎಂ ಸಿದ್ದರಾಮಯ್ಯರಿಂದ ಅಂತರ್ಜಾತಿ ವಿವಾಹ ದಂಪತಿಗಳ ನೋಂದಣಿ ವೆಬ್ಸೈಟ್ಗೆ ಚಾಲನೆ
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ದಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಆಗಮಿಸಿ ಪರಿಶೀಲಿಸುತ್ತಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ನೋಡಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹತ್ಯಾಕಾಂಡ ಗೊತ್ತಿದ್ದು ಬಿಜೆಪಿ ಯಾಕೆ ಟಿಕೆಟ್ ನೀಡಿತು? ವಿಡಿಯೋ ಹಂಚಿದವರಿಗೂ ಶಿಕ್ಷೆಯಾಗಲಿ