ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಪಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ಹೇಳಿದ್ದಾರೆ.
ಚಂದ್ರಶೇಖರನ್ ಪಿ ಆತ್ಮಹತ್ಯೆ ಆರೋಪದ ವಿಚಾರದಲ್ಲಿ ವಿಪಕ್ಷಗಳಿಂದ ರಾಜೀನಾಮೆಗೆ ಆಗ್ರಹ ಕೇಳಿಬಂದ ಹಿನ್ನಲೆಯಲ್ಲಿಂದು ಸಚಿವ ನಾಗೇಂದ್ರ ತುರ್ತು ಸುದ್ದಿಗೋಷ್ಠಿ ನಡೆಸಿ,ಆತ್ಮಹತ್ಯೆ ವಿಚಾರದಲ್ಲಿ ತಮ್ಮ ಪಾತ್ರ ಯಾವುದೂ ಇಲ್ಲದಿರುವುದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.ಹಣ ದುರುಪಯೋಗದ ಸುದ್ದಿ ಮಾಹಿತಿಯಿಂದ ತಮಗೆ ಲಭ್ಯವಾಗಿದ್ದು, ಅದನ್ನು ಪರಿಶೀಲನೆ ಮಾಡಲಾಗುವುದು ಎಂದರು. ವಾಲ್ಮೀಕಿ
ಇದನ್ನು ಓದಿ : ಪೆನ್ಡ್ರೈವ್ ಹಂಚಿಕೆ ಆರೋಪದಡಿ ಇಬ್ಬರ ಬಂಧನ
ನಿಗಮದ ಎಂಡಿ ಕೂಡ ದೂರು ನೀಡಿದ್ದಾರೆ. ಒಂದು ಬ್ಯಾಂಕ್ ನಿಂದ ಇನ್ನೊಂದು ಬ್ಯಾಂಕ್ ಗೆ ಹಣ ವರ್ಗಾವಣೆ ಮಾಡಿದ್ದಾರೆ. ವರ್ಗಾವಣೆ ಮಾಡಿದ್ದು ಕೂಡ ಎಂಡಿ ಗಮನಕ್ಕೆ ಬಂದಿಲ್ಲ. ಬ್ಯಾಂಕ್ ನವರು ಹಣದ ಮೊತ್ತವನ್ನು ನಮ್ಮ ನಿಗಮದ ಖಾತೆಗೆ ಮರು ವರ್ಗಾವಣೆ ಮಾಡಲು ಪ್ರಕ್ರಿಯೆ ಪ್ರಾರಂಭ ಮಾಡಿದ್ದೇವೆ.
ಬ್ಯಾಂಕ್ ಅಧಿಕಾರಿಗಳು ಕೂಡ ನಮ್ಮ ಗಮನಕ್ಕೆ ತಂದಿಲ್ಲ ಅಂತ ಎಂಡಿ ಪದ್ಮನಾಭನ್ ಹೇಳಿದ್ದಾರೆ .ಸುಮಾರು 87 ಕೋಟಿ ವರ್ಗಾವಣೆ ಮಾಡಲಾಗಿತ್ತು. ಈಗಾಗಲೇ 23 ಕೋಟಿ ಹಣ ವಾಪಸ್ ಪಡೆದುಕೊಳ್ಳಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ನ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇವೆ. ಉಳಿದ 50 ಕೋಟಿ ಕೂಡ ಹಿಂದಿರುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಇದನ್ನು ನೋಡಿ : ಲೈಂಗಿಕ ಹತ್ಯಾಕಾಂಡ :ಪ್ರಜ್ವಲ್ ಬಂಧನ ವಿಳಂಬಕ್ಕೆ ಹೈಕೋರ್ಟ್ ವಕೀಲ ಬಿ.ಟಿ.ವೆಂಕಟೇಶ್ ಆಕ್ರೋಶ