ಬಿಹಾರ : ಏರಿದ ತಾಪಮಾನದ ಪರಿಣಾಮ ಶಾಲಾ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾದ ಘಟನೆ ಬಿಹಾರದಲ್ಲಿ ಸಂಭವಿಸಿದೆ. ಶಾಲೆಗಳಲ್ಲಿ
ಉತ್ತರ ಭಾರತದ ಹಲವೆಡೆ ತಾಪಮಾನ ಏರುತ್ತಿದ್ದು, ಬಿಹಾರದಲ್ಲಿ 47 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಈ ಏರಿದ ತಾಪಮಾನ ಅಲ್ಲಿನ ಜನರ ಅದರಲ್ಲಿಯೂ ಶಾಲಾ ಮಕ್ಕಳ ಮೇಲೆ ಬಾರಿ ದುಷ್ಪರಿಣಾಮ ಬೀರುತ್ತಿದ್ದು, ಇಲ್ಲಿನ ಶಾಲಾ ವಿದ್ಯಾರ್ಥಿಗಳು ನಿರ್ಜಲೀಕರಣದಿಂದ ಕುಸಿದು ಬೀಳುತ್ತಿದ್ದಾರೆ.
ಇದನ್ನೂ ಓದಿ: ನಿರಂತರ ಮಳೆಯ ನಡುವೆ, ಬೆಂಗಳೂರು ಐದು ದಿನಗಳಲ್ಲಿ ಒಂದು ಡಿಗ್ರಿ ಸೆಲ್ಸಿಯಸ್ ತಾಪಮಾನ ಏರಿಕೆಯನ್ನು ನಿರೀಕ್ಷಿಸಬಹುದು: ಐಎಂಡಿ
ಬಿಹಾರ ರಾಜ್ಯದ ಹಲವು ಶಾಲೆಗಳಲ್ಲಿ ಸುಮಾರು 50 ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದು, ಕುಸಿದು ಬಿದ್ದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಗಳಲ್ಲಿ ತಾಪಮಾನ ಹೆಚ್ಚಳದಿಂದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಶಿಕ್ಷಕರು ಹೇಳಿದ್ದಾರೆ. ರಾಜ್ಯದ ಶೇಖ್ಪುರ ಎಂಬಲ್ಲಿ ಅನೇಕ ವಿದ್ಯಾರ್ಥಿನಿಯರು ಶಾಲೆಯಲ್ಲೇ ಆರೋಗ್ಯ ಸಮಸ್ಯೆಗೆ ಗುರಿಯಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ವಿಡಿಯೋ ವೈರಲ್ ಆಗಿದೆ.
ತೀವ್ರ ಬಿಸಿಲಿನ ಧಗೆಗೆ ಪುಟ್ಟ ಮಕ್ಕಳು ಬಳಲುತ್ತಿದ್ದು ಶಾಲೆಯ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕು ಶಾಲೆ ವಾತಾವರಣ ತಂಪಾಗಿಸುವ ಸೌಕರ್ಯಗಳನ್ನು ಒದಗಿಸಬೇಕು ಎಂದು ಇಲ್ಲಿನ ಶಾಲಾ ಮಕ್ಕಳ ಪೋಷಕರು ಸ್ಥಳೀಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ರಾಜಸ್ಥಾನ : ಬಿಜೆಪಿ ಪ್ರಾಬಲ್ಯ ಕಳೆದುಕೊಳ್ಳಲಿದೆಯೆ? ಲೆಕ್ಕಾಚಾರಗಳು ಏನು ಹೇಳುತ್ತಿವೆ! Janashakthi Media