ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಇದೀಗ ಪ್ರಜ್ವಲ್ ರೇವಣ್ಣಗೆ ಬಂಧನದ ಭೀತಿ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಶಾಲೆಗಳಲ್ಲಿ ಕುಸಿದು ಬಿದ್ದ ವಿದ್ಯಾರ್ಥಿಗಳು
ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಅರ್ಜಿ ಸಲ್ಲಿಸಿದ್ದಾರೆನ್ನಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ನಿರಂತರ ಅತ್ಯಾಚಾರ ಎಸೆಗಿದ್ದಾರೆಂದು ಒಟ್ಟು 3 ಪ್ರಕರಣಗಳಲ್ಲಿ ಪ್ರಜ್ವಲ್ ವಿರುದ್ಧ ದೂರು ದಾಖಲಾಗಿವೆ ಎಂದು ವರದಿಯಾಗಿದೆ.
ಇದನ್ನು ನೋಡಿ : ಗ್ರೇಸ್ ಮಾರ್ಕ್ಸ್ : ಶಾಲಾ ಶಿಕ್ಷಣದ ಹೀನಾಯ ಸ್ಥಿತಿ ಅನಾವರಣJanashakthi Media