ಬೆಂಗಳೂರು: ರಾಹುಲ್ ಗಾಂಧಿ ಗೆ ಹಣ ಕಳುಹಿಸಿದ ವಿಚಾರ ಹೊರಕ್ಕೆ ಬರಬಹುದೆಂಬ ಕಾರಣಕ್ಕೆ ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಆರೋಪಿಸಿದರು. ರಾಹುಲ್
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಐಟಿಗಳು ರಾಜ್ಯ ಸರಕಾರ ನೀಡುವ ಆದೇಶ ಪಾಲಿಸುವ ಏಜೆನ್ಸಿಗಳು ಎಂದರು. ಸತ್ಯಾಂಶ ಹೊರಕ್ಕೆ ಬರಲು ಸಿಬಿಐ ತನಿಖೆ ಮಾಡಿಸಿ ಎಂದು ಆಗ್ರಹಿಸಿದರು.
ಇಷ್ಟು ದೀರ್ಘ ಕಾಲ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯಗೆ ನಾಗೇಂದ್ರರನ್ನು ವಜಾ ಮಾಡುವ ಧೈರ್ಯ ಇಲ್ಲ ಮತ್ತು ಭ್ರಷ್ಟಾಚಾರಕ್ಕೆ ಪುಷ್ಟಿ ಕೊಡುವ ದಾರಿಯಲ್ಲಿ ಮುಂದೆ ಮುಂದೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು. ನಾನು ಮುಖ್ಯಮಂತ್ರಿ ಆಗಿದ್ದರೆ ಇಂಥ ಸಚಿವನನ್ನು ಮರುದಿನವೇ ವಜಾ ಮಾಡುತ್ತಿದ್ದೆ ಎಂದರಲ್ಲದೆ, ಚಂದ್ರಶೇಖರರ ಆತ್ಮಹತ್ಯೆ ನಡೆದಿದೆ. ಈ ಹಗರಣ ಭ್ರಷ್ಟಾಚಾರಕ್ಕೆ ಒಂದು ಜ್ವಲಂತ ಸಾಕ್ಷಿ ಎಂದು ಟೀಕಿಸಿದರು. ರಾಹುಲ್
ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಬೇಕು- ಪ್ರಲ್ಹಾದ ಜೋಶಿ ಆಗ್ರಹ
ಹಲವು ಖಾಸಗಿ ವ್ಯಕ್ತಿಗಳಿಗೆ ಹಣ ವರ್ಗಾವಣೆ ಆಗಿದ್ದು, ಸರಕಾರ ಮಾಹಿತಿ ಕೊಡುತ್ತಿಲ್ಲ ಎಂದು ಟೀಕಿಸಿದರು. ನಿಗಮದ ಅಧ್ಯಕ್ಷರು ಸತ್ಯ ಸಂಗತಿ ಯಾಕೆ ಬಿಡುಗಡೆ ಮಾಡಿಲ್ಲ ಎಂದ ಅವರು, ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಹಾಗೂ ಸಿಬಿಐ ತನಿಖೆ ಮಾಡಿಸಲು ಒತ್ತಾಯಿಸಿದರು. ನಾಗೇಂದ್ರರು 2 ದಿನಗಳಿಂದ ಕಾಣೆಯಾಗಿದ್ದಾರೆ; ಇದರ ಕುರಿತು ಸಿಎಂ ಮಾಹಿತಿ ಕೊಡಲಿ ಎಂದು ತಿಳಿಸಿದರು.
ಪೂರ್ಣ ಪ್ರಮಾಣದ ಸಾಕ್ಷ್ಯಗಳಿದ್ದರೂ ಸಿದ್ದರಾಮಯ್ಯ ಮೌನಿ ಆಗಿರುವುದೇಕೆ ಎಂದು ಪ್ರಶ್ನಿಸಿದರು. ಮಾತೆತ್ತಿದರೆ ನಾವು ಭ್ರಷ್ಟಾಚಾರ ವಿರೋಧಿಗಳು, 40 ಶೇ. ಕಮಿಷನ್ ಹೊಡೆದವರನ್ನು ಇಳಿಸಿದ್ದೀವಿ, ಭ್ರಷ್ಟಾಚಾರದ ತನಿಖೆ ಮಾಡಲು ಆಯೋಗ ರಚಿಸಿದ್ದಾಗಿ ಹೇಳುವ ಸಿದ್ದರಾಮಯ್ಯ ಭ್ರಷ್ಟಾಚಾರ ಕಡಿಮೆ ಮಾಡುವ ಪ್ರಯತ್ನ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಗುತ್ತಿಗೆದಾರರ ಸಂಘದವರು ಇವತ್ತು ಬಿಲ್ ಸಿಗದೆ ಒದ್ದಾಡುವಂತಾಗಿದೆ. ಕಮಿಷನ್ಗಾಗಿ ಬೇಡಿಕೆ ಕುರಿತು ದೊಡ್ಡದಾಗಿ ಹೇಳುವಂತಾಗಿದೆ. ರಟ್ಟಿನ ಪೆಟ್ಟಿಗೆಗಳಲ್ಲಿ ಹಣವೂ ಸಿಕ್ಕಿದೆ ಎಂದರು. ಇದೇ 6ರ ಬಳಿಕ ದೊಡ್ಡ ಪ್ರಮಾಣದ ಹೋರಾಟವನ್ನು ಬಿಜೆಪಿ ನಡೆಸಲಿದೆ ಎಂದು ವಿವರಿಸಿದರು.
15 ಖಾಸಗಿ ಕಂಪನಿಗಳಿಗೆ ಹಣ ವರ್ಗಾವಣೆ ಆಗಿದೆ. ಇದು ನೇರವಾಗಿ ಕಾಂಗ್ರೆಸ್ಸಿನ ಎಟಿಎಂಗೆ ಹೋಗುವ ಹಣವೆಂದು ಸಾಬೀತು ಪಡಿಸಿದೆ. ಸಚಿವರ ಸೂಚನೆ ಅಡಿಯಲ್ಲೇ ಇದು ನಡೆದಿದೆ ಎಂದು ಹೇಳಿದ್ದರೂ ಸಿದ್ದರಾಮಯ್ಯ ಜಾಣಕುರುಡರಾಗಿ ನಾಗೇಂದ್ರ ರಾಜೀನಾಮೆ ಪಡೆದಿಲ್ಲ ಎಂದು ಟೀಕಿಸಿದರು. 3 ಖಾತೆಗಳು ಹೈದರಾಬಾದ್ ಮೂಲದವು; ಇದರ ಮೂಲಕ ತೆಲಂಗಾಣಕ್ಕೆ ಹಣದ ವ್ಯವಸ್ಥೆ ಮಾಡಿದ್ದಾರೆ ಎಂದು ಆರೋಪಿಸಿದರು.
ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಎಸ್.ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮುಖಂಡ ಜಗದೀಶ ಹಿರೇಮನಿ ಇದ್ದರು.
ಇದನ್ನೂ ನೋಡಿ: ದೇವೇಗೌಡ್ರೆ ಇನ್ನಾದ್ರೂ ಪ್ರಕರಣದ ಹೊಣೆ ಹೊತ್ತು ರಾಜಕೀಯ ನಿವೃತ್ತಿ ಘೋಷಿಸಿ ; ಸಿದ್ದನಗೌಡ ಪಾಟೀಲ Janashakthi Media