ಬೆಂಗಳೂರು : ವಿಕೃತ ಕಾಮಿ, ಲೈಂಗಿಕ ದೌರ್ಜನ್ಯಗಳ ಗಂಭೀರ ಆರೋಪಕ್ಕೆ ಗುರಿಯಾಗಿ ಎಸ್ಐಟಿ ತನಿಖೆ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಜೂನ್ 10ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಈ ಹಿಂದೆ 42ನೇ ಎಸಿಎಂಎಂ ಕೋರ್ಟ್ ಅವರನ್ನು 6 ದಿನಗಳ ಎಸ್ಐಟಿ ಕಸ್ಟಡಿಗೆ ನೀಡಿತ್ತು. ಇಂದು ಗುರುವಾರ ಕಸ್ಟಡಿ ಮುಗಿದ ಹಿನ್ನೆಲೆ ಮತ್ತೆ ಕೋರ್ಟ್ 4 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿದೆ.
ಇದನ್ನು ಓದಿ : ಕಲ್ಲುತೂರಾಟ- ಮುಂಬೈ ಪೊಲೀಸರು, ಬಿಎಂಸಿ ಅಧಿಕಾರಿಗಳು ಗಾಯ
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ತನಿಖೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಹೀಗಾಗಿ ತನಿಖೆ ಕೊಂಚ ಹಿನ್ನಡೆಯಾಗಿದೆ. ಕೃತ್ಯ ನಡೆದ ಸ್ಥಳಕ್ಕೂ ಅವರನ್ನು ಕರೆದುಕೊಂಡು ಹೋಗಿ ಮಹಜರು ನಡೆಸಬೇಕಿದೆ. ಈ ಹಿನ್ನೆಲೆ ಎಸ್ಐಟಿ ಗುರುವಾಗ ಪ್ರಜ್ವಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ.
ಇದನ್ನು ನೋಡಿ : ಪರಿಸರ ಸಂರಕ್ಷಣೆ ನಮ್ಮ ಹೊಣೆ : ಮರುಭೂಮಿಯಾಗದಂತೆ ನೋಡಿಕೊಳ್ಳೋಣ Janashakthi Media