ರೇಣುಕಾಸ್ವಾಮಿ ಕೊಲೆ ಪ್ರಕರಣ; ಸ್ಟಾರ್ ನಟ ದರ್ಶನ್ ವಶಕ್ಕೆ

Please follow and like us:
ಮೈಸೂರು:  ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ನಟ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ವಶಕ್ಕೆ ಪಡೆಯಲಾಗಿದೆ.

ರೇಣುಕಾಸ್ವಾಮಿ ದರ್ಶನ್ ಗೆಳತಿ ಪವಿತ್ರಾ ಗೌಡಗೆ  ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದನು. ಈ ಕಾರಣಕ್ಕೆ ನಟ ದರ್ಶನ್ ಸೂಚನೆ ಮೇರೆಗೆ ಅವರ ಗೆಳೆಯರು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಟ ದರ್ಶನ್ ಪವಿತ್ರಾ ಗೌಡ ಎಂಬಾಕೆ ಜೊತೆ ಆಪ್ತವಾಗಿದ್ದು, ಈ ಬಗ್ಗೆ ಪವಿತ್ರಾ ಗೌಡ ಕೆಲ ಸಮಯ ಹಿಂದೆ ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಖಾರವಾಗಿ ಆಕ್ಷೇಪ ವ್ಯಕ್ತಪಡಿಸಿ ನಂತರ ಸೋಷಿಯಲ್ ಮೀಡಿಯಾ ಮೂಲಕ ಇಬ್ಬರೂ ಕಿತ್ತಾಡಿಕೊಂಡಿದ್ದು ಸುದ್ದಿಯಾಗಿತ್ತು.

ಇದನ್ನು ಓದಿ : ಜಗನ್ ರೆಡ್ಡಿ ಸರ್ಕಾರದ ವಿರುದ್ಧ ಪೆಗಾಸಸ್‌ ಆರೋಪ ಮಾಡಿದ ಟಿಡಿಪಿ

ಈ ಘಟನೆ ನಂತರ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತ ಅಶ್ಲೀಲ ಮೇಸೆಜ್ ಮಾಡಿದ್ದನು ಎಂದು ಹೇಳಲಾಗಿದೆ. ಇದರಿಂದ ಕೆರಳಿದ ದರ್ಶನ್ ಮತ್ತು ಅವರ ಸ್ನೇಹಿತರು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸಿದ್ದರು. ನಂತರ ದರ್ಶನ್ ಸೂಚನೆ ಮೇರೆಗೆ ರೇಣುಕ ಸ್ವಾಮಿಯನ್ನು ಕೊಲೆ ಮಾಡಿ ಮೋರಿಗೆ ಎಸೆದು ಹೋಗಿದ್ದರು. ಈ ಘಟನೆ ನಡೆದಿದ್ದು ಮೊನ್ನೆ ಜೂನ್ 9ರಂದು ಎಂದು ತಿಳಿದುಬಂದಿದೆ.

ಇದಾಗಿ ಮೋರಿಯಲ್ಲಿ ತೇಲುತ್ತಿದ್ದ ಶವವನ್ನು ಬೀದಿನಾಯಿಗಳು ಕಚ್ಚಿ ಎಳೆದುತಂದಾಗಲೇ ಶವ ಪತ್ತೆಯಾಗಿದ್ದು. ಮೊನ್ನೆ ಭಾನುವಾರ ಶವ ಪತ್ತೆಯಾಗಿತ್ತು. ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಇದರ ಹಿಂದಿನ ರೂವಾರಿ ದರ್ಶನ್ ಎಂದು ತಿಳಿದಿದೆ.

ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇಹವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

ಇದನ್ನು ನೋಡಿ : ಚುನಾವಣಾ ಫಲಿತಾಂಶ : ಬಿಜೆಪಿಯ ಗರ್ವಭಂಗವೇ? ಕಾಂಗ್ರೆಸ್ ಗೆ ಶಾಪ ವಿಮೋಚನೆಯೇ? Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *