ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು, 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಸ್ಸಾಂನ ಸಿಲ್ಚಾರ್ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿತ್ತು. ಈ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್ಜುಂಗಾ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ : ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ,ತಪ್ಪಿತಸ್ಥರನ್ನು ಬಿಡುವುದಿಲ್ಲ; ಧರ್ಮೇಂದ್ರ ಪ್ರಧಾನ್
ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆತಲಾ 2 ಲಕ್ಷ ಪರಿಹಾರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಘೋಷಣೆ ಮಾಡಿದ್ದಾರೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಚನಜುಂಗಾ ಎಕ್ಸ್ಪ್ರೆಸ್ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.
ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024