ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರ ಯಾವುದೇ ಮೂಲಗಳು ಸರ್ಕಾರಕ್ಕಿಲ್ಲ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರ ಯಾವುದೇ ಮೂಲಗಳು ಉಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಹೇಳಿಕೊಂಡಿರುವ ಸಿದ್ದರಾಮಯ್ಯ, ಸರ್ಕಾರ ಹೆಚ್ಚಳ ಮಾಡಿದೆ. ಮದ್ಯ

ಇದನ್ನೂ ಓದಿ: ಕೆಲವು ಅಧಿಕಾರಿಗಳನ್ನು ಅನ್‌ಫಿಟ್‌ ಎಂದ ಸಿಎಂ ಸಿದ್ದರಾಮಯ್ಯ

ಈ ಬದಲಾವಣೆಯ ನಂತರವೂ ದಕ್ಷಿಣ ಬಾರತದ ಇತರೆ ರಾಜ್ಯಗಳು ಹಾಗೂ ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ ಎಂದು ಬರೆದಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಅವಕಾಶ ಸೀಮಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ನೋಡಿ: ‘ಗಾಂಧೀಜಿಯ ಹ೦ತಕ’ – ಪುಸ್ತಕದಲ್ಲಿ ಏನಿದೆ? – ವೀರಶೆಟ್ಟಿ ಬಿ. ಗಾರಂಪಳ್ಳಿಯವರ ವಿಶ್ಲೇಷಣೆJanashakthi Media

Donate Janashakthi Media

Leave a Reply

Your email address will not be published. Required fields are marked *