ಅಂತಾರಾಷ್ಟ್ರೀಯ ಯೋಗ ದಿನಾಚರಣೆ; ಸಿಎಂ ಸಿದ್ದರಾಮಯ್ಯ ಯೋಗಭ್ಯಾಸ

ಳ್ಳಾರಿ : ಸಂತೋಷ್ ಲಾಡ್ ಫೌಂಡೇಷನ್ ಮತ್ತು ಶ್ವಾಸ ಯೋಗ ಸಂಸ್ಥೆ ಬಳ್ಳಾರಿಯ ಜೆ.ಎಸ್.ಡಬ್ಲ್ಯೂ ಟೌನ್ ಶಿಪ್ ನಲ್ಲಿ  ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ಯೋಗಭ್ಯಾಸ ಮಾಡಿದರು.

ಸಿಎಂ ಸಿದ್ದರಾಮಯ್ಯ ಜೊತೆ ನಟಿ ಶ್ರೀಲೀಲಾ ಸೇರಿದಂತೆ ಮತ್ತಿತರರು ಕೂಡ ಯೋಗ ಪ್ರದರ್ಶನ ನೀಡಿದರು.

ಇದನ್ನು ಓದಿ : ಹಾಸನ; ಶೂಟೌಟ್‌ನಿಂದ ಇಬ್ಬರು ವ್ಯಕ್ತಿಗಳು ಮೃತ

ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗಾಗಿ ಯೋಗ ಒಂದು ಪರಿಣಾಮಕಾರಿ ಸಾಧನ. ಇಂದು ಅಂತಾರಾಷ್ಟ್ರೀಯ ಯೋಗ ದಿನ. ಇಡೀ ಜಗತ್ತು ಭಾರತದ ಕೊಡುಗೆಯಾದ ಯೋಗದ ಮಹತ್ವವನ್ನು ಅರಿತು ಅನುಸರಿಸುತ್ತಿದೆ ಎಂದು ಹೇಳಿದರು.

ಭಾರತವು ಜಗತ್ತಿಗೆ ಪರಿಚಯಿಸಿದ ಅನನ್ಯ ಸಾಧನ ಯೋಗ. ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ ಸಾಧ್ಯ. ನಿತ್ಯ ಜೀವನಕ್ಕೆ ಬೇಕಿರುವ ಏಕಾಗ್ರತೆ, ಸಂಯಮ, ಒತ್ತಡ ನಿರ್ವಹಣೆಯ ಕೌಶಲ್ಯಗಳು ಯೋಗದಿಂದ ಲಭಿಸುತ್ತವೆ. ಯೋಗದ ಮೂಲಕ ರೋಗಮುಕ್ತವಾದ ನೆಮ್ಮದಿಯ ಬದುಕು ಕಂಡುಕೊಳ್ಳೋಣ ಎಂದರು.

ಇದನ್ನು ನೋಡಿ : ಸ್ಪೀಕರ್‌ ಹುದ್ದೆಯ ಮೇಲೆ ಎಲ್ಲರ ಕಣ್ಣು – ಸ್ಪೀಕರ್‌ ಯಾರಾಗ್ತಾರೋ ಅವರದ್ದೆ ಸರ್ಕಾರ! Janashakthi Media

Donate Janashakthi Media

Leave a Reply

Your email address will not be published. Required fields are marked *